ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ "ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾನ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ , ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.