ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಂಗೊಳ್ಳಿ ರಾಯಣ್ಣನ ಹುಟ್ಟೂರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನ ಬದುಕಿನ ಪ್ರಮುಖ ಘಟನಾವಳಿಗಳನ್ನು ಪ್ರತಿಬಿಂಬಿಸುವ ದೃಶ್ಯಗಳ ಶಿಲ್ಪವನ(ರಾಕ್ ಗಾರ್ಡನ್)ವನ್ನು ಜ.17, 2024ರಂದು ಲೋಕಾರ್ಪಣೆಗೊಳಿಸಿದರು.
ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬಿಜೆಪಿ ವಿರುದ್ಧ ಗುಡುಗಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ಈಗ ಕುರಿತಾಗಿ ಈಗ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಬೆಂಗಳೂರಿನ ಭಾಷ್ಯಂ ವೃತ್ತದ ಸ್ಯಾಂಕಿ ಕೆರೆ ಬಳಿ ಇರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದು ಕರ್ನಾಟಕ, ಮಹಾರಾಷ್ಟ್ರ ನಡುವಣ ಉದ್ವಿಗ್ನ ಸ್ಥಿತಿಗೆ ಕಾರಣರಾಗಿದ್ದ 7 ಮಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
Siddaramaiah Statement: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ಖಂಡನೀಯ. ಎಂಇಎಸ್ ನವರು ಪುಂಡರು. ಅವರಿಗೆ ಕಾನೂನು ಇಲ್ಲ, ಏನೂ ಇಲ್ಲ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಅನ್ನೋದು ಸತ್ತು ಹೋಗಿದೆ. ಆಡಳಿತದ ಮೇಲೆ ಈ ಸರ್ಕಾರಕ್ಕೆ ಹಿಡಿತ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡವೆಂದು ಕುಮಾರಸ್ವಾಮಿ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆ ಖಂಡನೀಯ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ ಮಹಾಪುರುಷರು- ಸಚಿವ ರಮೇಶ್ ಜಾರಕಿಹೊಳಿ
ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ- ಹೆಚ್.ಡಿ. ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.