maharashtra election results 2024: ಕಾಂಗ್ರೆಸ್ ಗ್ಯಾರಂಟಿ ಯಾವುದೂ ಇಲ್ಲ.. ಮಹಾರಾಷ್ಟ್ರದಲ್ಲಿ ಒಂದು ಪರ್ಸೆಂಟ್ ಕೂಡ ಕೆಲಸ ಮಾಡಿಲ್ಲ. ಇದಕ್ಕಾಗಿಯೇ ಈ ಫಲಿತಾಂಶ ಬಂದಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.
Santhosh Bangar controversy statement: NCP-SP ವಕ್ತಾರ ಕ್ಲೈಡ್ ಕ್ರಾಸ್ಟೊ ಈ ಬಗ್ಗೆ ಮಾತನಾಡಿದ್ದು, 'ಶಾಲಾ ಮಕ್ಕಳನ್ನುದ್ದೇಶಿಸಿ ಸಂತೋಷ್ ನೀಡಿರುವ ಹೇಳಿಕೆ ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ದಾರೆ.
Facebook Live Murder Incident: ಶಿವಸೇನೆಯ (ಯುಬಿಟಿ) ಮಾಜಿ ಕೌನ್ಸಿಲರ್ ಅಭಿಷೇಕ್ ಘೋಷಾಲ್ಕರ್ ಅವರನ್ನು ಮುಂಬೈನ ಉಪನಗರವಾದ ದಹಿಸರ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದಾಳಿಯ ನಂತರ ದಾಳಿಕೋರ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಣದ ವಿಚಾರವಾಗಿ ಅಭಿಷೇಕ್ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಅಭಿಷೇಕ್ ಶಿವಸೇನಾ ಮಾಜಿ ಶಾಸಕ ವಿನೋದ್ ಘೋಷಾಲ್ಕರ್ ಅವರ ಪುತ್ರನಾಗಿದ್ದಾನೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ವಕ್ತಾರರು ಶಿಂಧೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಶಿವಸೇನೆಯ ಪುಂಡಾಟಿಕೆ... ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಗಡಿಯಲ್ಲಿ ಶಿವಸೇನೆಯ ಧಮ್ಕಿ... ಶಿವಸೇನೆಯ ಪುಂಡರನ್ನ ಗಡಿಯಲ್ಲಿ ತಡೆದ ಸ್ಥಳೀಯ ಪೊಲೀಸರು... ಉದ್ದವ ಠಾಕ್ರೆ ಬಣದ ವಿಜಯ ದೇವನೆಯಿಂದ ಉದ್ಧಟತನ.. 50 ಜನ ಗುಂಪಿನೊಂದಿಗೆ ಬಂದಿದ್ದ ವಿಜಯ ದೇವನೆ ತಂಡ
ನಾಡದ್ರೋಹಿ MES ಕರಾಳ ದಿನಾಚರಣೆಗೆ ಶಿವಸೇನೆ ಬೆಂಬಲ
ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ
ಬೆಳಗಾವಿ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ MES ತಯಾರಿ
ಶಿವಸೇನೆ ಉದ್ಧವ್ ಠಾಕ್ರೆ ಬಣದಿಂದ ಬೆಳಗಾವಿ ಚಲೋಗೆ ಕರೆ
ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಳಗಾವಿ ಚಲೋಗೆ ಕರೆ
2024ರ ಲೋಕಸಭಾ ಚುನಾವಣೆ ಗೆಲುವಿಗಾಗಿ ಬಿಜೆಪಿ ಭಾರೀ ರಣತಂತ್ರ ರೂಪಿಸುತ್ತಿದೆ. ಈ ಬಾರಿ ಬಿಜೆಪಿ ಹಲವು ಹಂತಗಳಲ್ಲಿ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಿದೆ, ತನ್ನ ಪಕ್ಷದ ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಮೀಕ್ಷೆಗಳನ್ನು ನಡೆಸುತ್ತಿದೆ. NDAಯ ಮಿತ್ರಪಕ್ಷಗಳಿಗೆ ಹೇಗೆ ಸ್ಥಾನ ಹಂಚಿಕೆ ಮಾಡಬೇಕು ಅನ್ನೋದರ ಬಗ್ಗೆ ಬಿಜೆಪಿ ಚಿಂತನೆ ನಡೆಸುತ್ತಿದೆ.
Shiv Sena Stand On Uniform Civil Code: ಈ ಕುರಿತಂತೆ ಉದ್ಧವ್ ಠಾಕ್ರೆ ಬಣದ ಶಿವಸೇನೆ ಯಾವುದೇ ನಾಯಕರು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ ಎಂಬುದು ಇಲ್ಲಿ ಗಮನಾರ್ಹ.
Maharashtra Politics: ಪ್ರಸ್ತುತ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ-ಬಿಜೆಪಿ ಮೈತ್ರಿಯ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ, ಇದೀಗ ಈ ಮೈತ್ರಿಯಲ್ಲಿ ಬಿರುಕು ಕಾಣಿಸಿರುವ ಸಂಕೇತಗಳು ಲಭ್ಯವಾಗುತ್ತಿವೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ದೊಡ್ಡ ಗೆಲುವಿನ ಒಂದು ದಿನದ ನಂತರ, ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಮೋದಿ ಅಲೆ ಅಂತ್ಯಗೊಂಡಿದೆ ಎಂದು ಹೇಳಿದ್ದಾರೆ.
Maharashtra Politics: ಗೊಗವಾಲೆ (ಶಿಂಧೆ ಬಣ) ಅವರನ್ನು ಶಿವಸೇನಾ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಿರುವ ಸ್ಪೀಕರ್ ಅವರ ನಿರ್ಧಾರ ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ರಾಜಕೀಯ ಪಕ್ಷ ನೇಮಿಸುವ ವಿಪ್ಗೆ ಮಾತ್ರ ಸ್ಪೀಕರ್ ಮಾನ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
SC On Maha Political Crisis: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ. ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ
ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ: ಮುಂದಿನ 15-20 ದಿನಗಳಲ್ಲಿ ಮಹಾರಾಷ್ಟ್ರದ ಶಿಂಧೆ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆಯ ಉದ್ಧವ್ ಬಣದ ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ. ಯಾವ ಆಧಾರದಲ್ಲಿ ಅವರು ಈ ದೊಡ್ಡ ಹೇಳಿಕೆ ನೀಡಿದ್ದಾರೆ ಎಂದು ತಿಳಿಯಿರಿ.
ಬೃಹನ್ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ),ಗುರುವಾರದಂದು ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಮಧ್, ಎರಂಗಲ್ ಮತ್ತು ಭಾಟಿ ಪ್ರದೇಶಗಳಲ್ಲಿ ಐದು ಅಕ್ರಮ ಫಿಲ್ಮ್ ಸ್ಟುಡಿಯೋಗಳ ವಿರುದ್ಧ ಕೆಡವು ಕಾರ್ಯಾಚರಣೆಯನ್ನು ನಡೆಸಿತು.
Election Commission on Shiv Sena: ಶಿವಸೇನಾ ಪಕ್ಷದ ಪ್ರಸ್ತುತ ಸಂವಿಧಾನವು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಚುನಾವಣಾ ಆಯೋಗವು ಕಂಡುಹಿಡಿದಿದೆ. ಇದರಲ್ಲಿ ಯಾವುದೇ ಚುನಾವಣೆಯಿಲ್ಲದೆ ಸದಸ್ಯರನ್ನು ಪದಾಧಿಕಾರಿಗಳಾಗಿ ನೇಮಿಸಲಾಗಿದೆ. ಅಂತಹ ಪಕ್ಷದ ರಚನೆಯು ನಂಬಿಕೆಯನ್ನು ಮುರಿಯುತ್ತದೆ ಎಂದು ಹೇಳಿದೆ.
ಮಹಾ ಪುಂಡರು ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕನ್ನಡ ನೆಲದಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಿ ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂದು ನಿರ್ಣಯ ಮಂಡನೆ ಮಾಡಿದ್ದಾರೆ.
ಶೀವಸೇನೆ ಉದ್ಧಟತನದ ವಿರುದ್ಧ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.. ಬೆಳಗಾವಿಯ ಹಿರೇಬಾಗೇವಾಡಿ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಲಾರಿಗಳ ಗಾಜು ಒಡೆದು ಆಕ್ರೋಶ ಹೊರ ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.