ರಾಜ್ಯಪಾಲರಿಗೆ ಬೆಳಗ್ಗೆ 11:30ಕ್ಕೆ ದೂರು ನೀಡಿದರೆ ಸಂಜೆ 6 ಗಂಟೆ ವೇಳೆಗೆ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಇದನ್ನು ನೋಡಿದರೆ ರಾಜಪಾಲರು ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಹೇಳಿದಂತೆ ಕುಣಿಯುತ್ತಿರುವುದು ಗೊತ್ತಾಗುತ್ತಿದೆ ಎಂದು ಸಚಿವ ಶಿವರಾಜ್ ತಂಗಡಗಿ ಕಿಡಿಕಾರಿದರು.
ಏ.30: ಬಿಜೆಪಿಯವರಿಗೆ ಮಾತನಾಡಲು ಮಾತ್ರ ರಾಮನಾ? ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿ ಸುಳ್ಳು ಹೇಳಿದ ಪಕ್ಷ ಬಿಜೆಪಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಆಸ್ತಿ. ಈ ದೇಶದ ಪರಿವಾರಕ್ಕೆ ಸೇರಿದವರು. ದೇಶವಾಸಿಗಳ ಆರಕ್ಷಕರು. ಅದಕ್ಕಾಗಿ ಜನರೇ ಮೋದಿಯವರಿಗೆ ಜೈಕಾರ ಕೂಗುತ್ತಿದ್ದಾರೆ. ಹೀಗಿರುವಾಗ ಅವರೆಲ್ಲರ ಕಪಾಳಕ್ಕೆ ಹೊಡೆಯುವ "ಶಕ್ತಿ" ನಿಮ್ಮ "ಕೈ"ಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಪರಿಶೀಲಿಸಲು ಡಿಸೆಂಬರ್ 23ರಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಜಿಲ್ಲಾಸ್ಪತ್ರೆಯಲ್ಲಿನ ಸ್ಥಿತಿಗತಿಯ ಬಗ್ಗೆ ಕೇಳಿ ಅಲ್ಲಿನ ಅವ್ಯವಸ್ಥೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ, ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆದು ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಲೋಕಸಭೆ ಚುನಾವಣೆ ಬಂದಾಗ ಪಾಕಿಸ್ತಾನ, ಭಯೋತ್ಪಾದಕರು, ಅಂಜನಾದ್ರಿ ಆಂಜನೇಯ, ಮಸೀದಿ ನೆನಪಾಗುತ್ತದೆ. ಹಿಂದೂ ಹೆಸರಿನಲ್ಲಿ ಬಿಜೆಪಿಗರು ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ನಲ್ಲಿ ಹಿಂದೂಗಳಿಲ್ವಾ.? ನಾವೆಲ್ಲ ಹಿಂದೂಗಳಲ್ವಾ.? ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನೆ ಮಾಡಿದರು.
ಜಲಾಶಯದಲ್ಲಿ ನೀರಿನ ಸಂಗ್ರಹ ಲಭ್ಯತೆ ಹಾಗೂ ರೈತರಿಗೆ ಈ ಹಿಂದೆ ತಾವು ನೀಡಿದ್ದ ಭರವಸೆಯಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಡ್ಯಾಂ ನಲ್ಲಿ ಐದು ಟಿಎಂಸಿ ನೀರು ಕೊರತೆ ಇದ್ದು, ಒಳ ಹರಿವಿನ ಪ್ರಮಾಣ ಕಡಿಮೆಯಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ. ಆಂಧ್ರಕೋಟಾದಲ್ಲಿ ನೀಡಲಾಗುವ ನೀರನ್ನು ನಮಗೆ ಬಿಡುವಂತೆ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ ಇರುವ 88 ಟಿಎಂಸಿ ನೀರಿನ ಪೈಕಿ ರಾಜ್ಯದ ಪಾಲಿಗೆ 65 ಟಿಎಂಸಿ ಇದೆ. ಈಗಾಗಲೇ 10 ಟಿಎಂಸಿ ಬಳಕೆ ಮಾಡಿದ್ದು, ಆಂಧ್ರಕ್ಕೆ 3 ಟಿಎಂಸಿ ನೀರು ಹರಿಸಲಾಗಿದೆ ಎಂದು ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.
Shivaraj Tangadagi : ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು.
Shivaraj Tangadagi : ಹಳ್ಳಿಕಾರ್ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಭರವಸೆ ನೀಡಿದ್ದಾರೆ.
ಮಾಜಿ ಸಚಿವ ಶಿವರಾಜ್ ತಂಗಡಗಿ ಕ್ರಿಕೆಟ್ ಆಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಕಾರ್ಯಕರ್ತರೊಂದಿಗೆ ಕ್ರಿಕೆಟ್ ಆಡೋ ಮೂಲಕ ಗಮನ ಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.