ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು.
ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದ್ವಾರಕಾ ತಿರುಮಲ ರಾವ್ ಅವರು ತಿರುಪತಿ ಲಡ್ಡು ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯನ್ನು ಅಮಾನತುಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಅಕ್ಟೋಬರ್ 3 ರವರೆಗೆ ತನಿಖೆಯನ್ನು ತಡೆಹಿಡಿಯಲಾಗುತ್ತದೆ. ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಕೆ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವ ಹೊಣೆಯನ್ನು ಎಸ್ಐಟಿಗೆ ವಹಿಸಲಾಗಿತ್ತು.
ಹಿರಿಯ ಐಪಿಎಸ್ ಅಧಿಕಾರಿ ಅಮಿತ್ ಗರ್ಗ್ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ರಚಿಸಿ ಪ್ರಕರಣದ ತನಿಖೆಯ ಜವಾಬ್ದಾರಿ ನೀಡಿರುವ ಸಿಎಂ, ತ್ವರಿತವಾಗಿ ತನಿಖೆ ನಡೆಸಿ ಶೀಘ್ರದಲ್ಲಿಯೇ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.