ಶ್ರೀಲಂಕಾದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಹೊರಗೆ ಗದ್ದಲವನ್ನು ಸೃಷ್ಟಿಸಿದ್ದಾರೆ. ಇದೇ ವೇಳೆ ಜೋಡಿಯೊಂದು ಪರಸ್ಪರ ಚುಂಬಿಸುತ್ತಿರುವುದು ಕಂಡುಬಂದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಮಾಲ್ಡಿವ್ಸ್ ಗೆ ಪಲಾಯನ ಮಾಡಿದ ನಂತರ ಪ್ರಧಾನ ಮಂತ್ರಿ ರನಿಲ್ ವಿಕ್ರಮಸಿಂಘೆ ಅವರನ್ನು ಬುಧುವಾರದಂದು ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿವಾಸಗಳನ್ನು ಪ್ರತಿಭಟನಾಕಾರರು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.
ಶ್ರೀಲಂಕಾದ ರಾಜಧಾನಿಯಲ್ಲಿರುವ ಅಧ್ಯಕ್ಷ ಗೋತಬಯ ರಾಜಪಕ್ಸೆ ಅಧಿಕೃತ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ಕೆಲವೇ ಗಂಟೆಗಳ ನಂತರ, ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಲು ಶನಿವಾರದಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಇಡೀ ವಿಶ್ವದಲ್ಲೇ ಸುದ್ದಿಯಲ್ಲಿರುವ ವಿಚಾರ ಎಂದರೆ ಅದು ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು. ಎಕನಾಮಿಕ್ ಕ್ರೈಸಿಸ್ನಿಂದ ನಲುಗಿರುವ ಲಂಕೆಯಲ್ಲಿ ಜನ ತಿನ್ನುವ ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
"ಕೆಲವು ರಾಜಕೀಯ ವ್ಯಕ್ತಿಗಳು ಮತ್ತು ಅವರ ಕುಟುಂಬಗಳು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವದಂತಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಹೈಕಮಿಷನ್ ಇತ್ತೀಚೆಗೆ ಗಮನಿಸಿದೆ. ಇದು ನಕಲಿ ಸುದ್ದಿ ಮತ್ತು ಸ್ಪಷ್ಟವಾದ ಸುಳ್ಳು ವರದಿಗಳು. ಈ ವಿಚಾರವನ್ನು ಹೈಕಮಿಷನ್ ಬಲವಾಗಿ ನಿರಾಕರಿಸುತ್ತದೆ" ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಶ್ರೀಲಂಕಾದಲ್ಲಿ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಇಲ್ಲಿನ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.