ಆಂಧ್ರಪ್ರದೇಶದ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವ ಪ್ರಸಾದ್ ರಾವ್ ಅವರು ಹೈದರಾಬಾದ್ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 72 ವರ್ಷದ ಶ್ರೀ ರಾವ್ ಅವರು ರಾಜ್ಯದ ವಿರೋಧ ಪಕ್ಷದ ತೆಲುಗು ದೇಶಂ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು.
ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ, ಅಸಭ್ಯವಾಗಿ ನಡೆದುಕೊಂಡ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ 20 ದಿನ ಕಳೆದರೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿನ ಸಹಾಯಕ ಪ್ರಾಧ್ಯಾಪಕ ಮತ್ತು ಅವರ ಪತ್ನಿ ಒಡಿಶಾದ ರೂರ್ಕೆಲಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಐಟಿ ಹೈದರಾಬಾದ್ ವಿದ್ಯಾರ್ಥಿ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜ್ ಕ್ಯಾಂಪಸ್ ನ ಹಾಸ್ಟೆಲ್ ರೂಂನಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ವರ್ಷ ಈ ಸಂಸ್ಥೆಯಲ್ಲಿ ಸಂಭವಿಸುತ್ತಿರುವ ಎರಡನೇ ಆತ್ಮಹತ್ಯೆ ಪ್ರಕರಣವಾಗಿದೆ.
ಹನ್ನೆರಡು ವರ್ಷದ ಬಾಲಕಿ ಹಾರರ್ ಧಾರಾವಾಹಿ ವೀಕ್ಷಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಡೆದಿದೆ. ಪೋಷಕರು ಹತ್ತಿರದ ಮಾರುಕಟ್ಟೆಗೆ ಹೋಗಿದ್ದಾಗ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಆತ್ಮಹತ್ಯೆ ಯತ್ನಕ್ಕೂ ಮುನ್ನ ಡೆತ್ ನೋಟ್ ಬರೆದಿರುವ ಆರ್.ರೇವಣಕುಮಾರ್, ನನ್ನ ಸಾವಿಗೆ ರಾಜ್ಯ ಸರ್ಕಾರವೇ ಕಾರಣ. ನಾನು ಸತ್ತ ಮೇಲೆ ನನ್ನ ಅಂತ್ಯ ಸಂಸ್ಕಾರ ಮುಖ್ಯಮಂತ್ರಿಗಳಿಂದಲೇ ನಡೆಯಬೇಕು ಎಂದು ಬರೆದಿದ್ದಾರೆ.
ಟಿಕ್ ಟಾಕ್ ಗೇಮ್ ಆಡುತ್ತಿದ್ದ ಕುಶಾಲ್, ಆ ಗೇಮ್ ನ ಚಾಲೆಂಜ್ ಮುಗಿಸಲು ತಡರಾತ್ರಿ ಎದ್ದು, ಆ ವೀಡಿಯೋದಲ್ಲಿ ತನ್ನ ಕೊರಳಿಗೆ ಮಂಗಳಸೂತ್ರ, ನೆಕ್ಲೇಸ್ ಮತ್ತು ಕೈಗಳಿಗೆ ಬಳೆಗಳನ್ನು ತೊಟ್ಟು ಬಳಿಕ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.