ಹುಬ್ಬಳ್ಳಿಯ ಈದ್ಗಾ ಮೈದಾನ ಈಗ ಮತ್ತೆ ಸುದ್ದಿಯಲ್ಲಿದೆ. ಕಳೆದ ಗಣೇಶೋತ್ಸವ ಸಂದರ್ಭದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶಕ್ಕೆ ಆಗ್ರಹಿಸಿ ಹಿಂದು ಪರ ಸಂಘಟನೆಗಳು ಪಟ್ಟು ಹಿಡಿದು ಆಚರಣೆ ಮಾಡಿದವು. ಆದರೆ ಈಗ ಅದೇ ಹೋರಾಟ ಹಿಂದು ಪರ ಸಂಘಟನೆಗಳಿಗೆ ತಿರುಗಬಾಣವಾಗಿದೆ.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಬಿಜೆಪಿ ಪಕ್ಷವು ಟಿಪ್ಪುವನ್ನು ವಿರೋಧಿಸಿರುವುದರಿಂದ ಟಿಪ್ಪು ಸಂಬಂಧಿತ ಎಲ್ಲಾ ವಿಷಯಗಳನ್ನು ಶೇ.101ರಷ್ಟು ತೆಗೆದುಹಾಕಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.
ಟಿಪ್ಪು ಸುಲ್ತಾನ್ ನಿಂದ ನಮ್ಮ ಕುಟುಂಬಕ್ಕೆ ಈ ಹಿಂದೆ ಬಹಳ ತೊಂದರೆಯಾಗಿದೆ. ಹಾಗಾಗಿ ವೈಯಕ್ತಿಕವಾಗಿ ನಾನು ಟಿಪ್ಪು ಜಯಂತಿ ಬೆಂಬಲಿಸುವುದಿಲ್ಲ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.
ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.