Tippu Film : ಕೆಲವು ದಿನಗಳ ಹಿಂದೆ ಬಿಜೆಪಿ ಮುಖಂಡ ಹಾಗೂ ನಿರ್ಮಾಪಕ ಮುನಿರತ್ನ ಅವರು ಉರಿಗೌಡ ನಂಜೇಗೌಡ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ಅವರು ಸಿನಿಮಾ ಬಗ್ಗೆ ಮಾತನಾಡಿದಾಗಿಂದಲೂ ಅದು ಸಾಕಷ್ಟು ವಿವಾದಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಮತ್ತೊಂದು ಸಿನಿಮಾ ಹೆಸರು ಸಾಕಷ್ಟು ಸದ್ದು ಮಾಡುತ್ತಿದೆ.
ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಲಿದೆ.. ಜಿಲ್ಲೆಯಾದ್ಯಂತ ಅಶ್ವತ್ಥ್ ನಾರಾಯಣ್ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಲಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು
ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ
ನಿಮಗೆ ಸಾವರ್ಕರ್ ಬೇಕಾ..? ಟಿಪ್ಪು ಬೇಕಾ..? ನೀವೇ ತೀರ್ಮಾನಿಸಿ
ಟಿಪ್ಪುವಿನ ಜಾಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದು ಬಿಡ್ತಾರೆ
ಉರಿಗೌಡ ನಂಜೇಗೌಡ ಏನ್ ಮಾಡಿದ್ರಿ ಟಿಪ್ಪುಗೆ!
ಅದೇ ರೀತಿ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು
ಸಾತನೂರು ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ
ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ಇಲ್ಲಿ ಪಾಲಿಕೆ ರಾಜಕೀಯ ಉದ್ದೇಶಕ್ಕೆ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಮುಸ್ಲಿಂ ಸಮುದಾಯದ ಮುಖಂಡ ಅಲ್ತಾಫ್ ಹಳ್ಳೂರು ದೂರಿದ್ದಾರೆ.
ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್ ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ ಸಿದ್ರಾಮಯ್ಯನವರಿಗೆ ಮೈಮೇಲೆ ಬಂದವರಂತೆ ಆಡುತ್ತಾರೆ ಎಂದಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಟೀಕಾ ಪ್ರಹಾರ ನಡೆಸಿದ್ದಾರೆ.
'ಟಿಪ್ಪು ಸುಲ್ತಾನ್ ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿ ನಾಯಕರಿಗೆ.ಹತ್ತು ವರ್ಷಗಳ ಹಿಂದೆ ಈ ರೀತಿ ಮೈಮೇಲೆ ಬಂದಾಗಲೇ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಡಾ.ಶೇಖ್ ಅಲಿ ಅವರಿಂದ 425 ಪುಟಗಳ ಪುಸ್ತಕ ಬರೆಸಿ ಸರ್ಕಾರದಿಂದಲೇ ಪ್ರಕಟಿಸಿದ್ದು" ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಮೈಸೂರು ಹುಲಿ ಖ್ಯಾತಿಯ ಟಿಪ್ಪು ಸುಲ್ತಾನ್, ಹೈದರ್ ಅಲಿಗೆ ಸಂಬಂಧಿಸಿದ ಹಲವಾರು ಅಧ್ಯಾಯಗಳನ್ನು 7 ನೇ ತರಗತಿಯ ಪಠ್ಯಪುಸ್ತಕದಿಂದ ಕೈಬಿಡಲಾಗಿದೆ ಎಂದು ಘೋಷಿಸಿದ ನಂತರ, ಮೊಟಕುಗೊಳಿಸಿದ ಪಠ್ಯಕ್ರಮವನ್ನು ಈಗ ತಡೆಹಿಡಿಯಲಾಗಿದೆ.
ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ಕೋವಿಂದ್ ಅವರು ವಿಧಾನಸೌಧಕ್ಕೆ ಬಂದು ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ.
ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಬಿಜೆಪಿ ಪಕ್ಷವು ಟಿಪ್ಪುವನ್ನು ವಿರೋಧಿಸಿರುವುದರಿಂದ ಟಿಪ್ಪು ಸಂಬಂಧಿತ ಎಲ್ಲಾ ವಿಷಯಗಳನ್ನು ಶೇ.101ರಷ್ಟು ತೆಗೆದುಹಾಕಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.