ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹೀರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿರುವ ಹೈಕೋರ್ಟ್, ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.
2A Reservation For Panchamasali Community: ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕೇ ನ್ಯಾಯಾಲಯಕ್ಕೆ ಹೋದರೆ ಬಿದ್ದೋಗುವ ರೀತಿಯಲ್ಲಿ ಕಾಟಾಚಾರಕ್ಕೆ ಕೊಟ್ಟರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜೊತೆಗೆ ಚರ್ಚಿಸಿ ಗೊಂದಲ ಬಗೆಹರಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿರು.
Hubballi Dharwad mayoral elections: ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿಚಾರವಾಗಿ ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯವರು ಯಾರು ಮನೆಯಲ್ಲಿ ಒಂದು ಆಕಳು ಕಟ್ಟಿಲ್ಲ. ಮಾತು ಆಡುತ್ತಾರೆ ಅಷ್ಟೇ. ಪ್ಲ್ಯಾಸ್ಟಿಕ್ ಆಕಳನ್ನು ಪೂಜೆ ಮಾಡುತ್ತಾರೆ. ಮಾತಾಡಿ ಜನರಿಗೆ ದಾರಿ ತಪ್ಪಿಸುವುದು ಬೇರೆ. ವಾಸ್ತವವಾಗಿ ಅನುಭವಿಸುವುದು ಬೇರೆ ಎಂದ ಗೋ ಹತ್ಯೆ ಕಾಯ್ದೆ ತಿದ್ದುಪಡಿಯನ್ನು ಸಮರ್ಥಿಸಿಕೊಂಡರು.
ವಿನಯ್ ವಿದ್ಯಾರ್ಥಿ ನಾಯಕ, ಅನ್ಯಾಯ ಜನರಿಗೆ ಅರ್ಥವಾಗಿದೆ;ಲಾಡ್ - ವಿನಯ್ ಕುಲಕರ್ಣಿ ಗೆಲ್ಲಿಸಬೇಕೆಂದು ಸಂತೋಷ್ ಲಾಡ್ ವಿಶ್ವಾಸ - ಅಮ್ಮಿನಬಾವಿಯಲ್ಲಿ ಮಾಜಿ ಸಚಿವ ಲಾಡ್ ರೋಡ್ ಶೋ
Vinay Kulkarni : ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಧಾರವಾಡ ಭೇಟಿಗೆ ನಿರ್ಭಂದಿಸಿದೆ.
ಹುಬ್ಬಳ್ಳಿ- ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ನಾಮಪತ್ರ ಸಲ್ಲಿಕೆ ನಿಮಿತ್ತ ನಡೆದ ರೋಡ್ ಶೋನಲ್ಲಿ ಮಾಜಿ ಸಚಿವರಾದ ಸಂತೋಷ್ ಲಾಡ್ ಭಾಗವಹಿಸಿದರು. ಧಾರವಾಡ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆ ವಿನಯ್ ಕುಲಕರ್ಣಿ ಅನುಪಸ್ಥಿತಿಯಲ್ಲಿ ಅವರ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಸಿದರು.
ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಪ್ಲ್ಯಾನ್ ಮಾಡಲಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಅಭ್ಯರ್ಥಿ ಆಗುತ್ತಾರೆ ಎಂದು ಹಾವೇರಿಯಲ್ಲಿ ʻಕೈʼ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.