ಕೆಲವು ಮಹಿಳಾ ಹಾಗೂ ಅಪ್ರಾಪ್ತ ಕುಸ್ತಿಪಟು ಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಖಾಪ್ ನಾಯಕರು ಜೂನ್ 9 ರ ಗಡುವನ್ನು ಶುಕ್ರವಾರ ನಿಗದಿಪಡಿಸಿದ್ದಾರೆ.
Brij Bhushan Sharan Singh: ಸುದ್ದಿಗಾರರ ಜೊತೆಗೆ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಬಳಿಕ ಸರ್ಕಾರವೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
Brij Bhushan Singh: ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ಯಾವುದೇ ರೀತಿಯ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಅಂತಾ ಬ್ರಿಜ್ಭೂಷಣ್ ಹೇಳಿದ್ದಾರೆ.
Wrestlers Protest: ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿ ಪ್ರಕಟಗೊಂಡ ವರದಿಯ ಪ್ರಕಾರ, ವಾರ್ಮ್ ಅಪ್, ಟೂರ್ನಿಯ ವೇಳೆ ಹಾಗೂ WFI ಕಚೇರಿಯಲ್ಲಿ ಲೈಂಗಿಕ ಕಿರುಕುಳ ಎದುರಿಸಬೇಕಾದ ಹಲವು ಸಂದರ್ಭಗಳು ಎದುರಾಗಿವೆ ಎಂದು ಮಹಿಳಾ ಕುಸ್ತಿಪಟುಗಳು ತಮ್ಮ ದೂರಿನಲ್ಲಿ ಹೇಳಿಕೊಂಡಿದ್ದಾರೆ. ಪೊಲೀಸರ ಬಳಿ ದಾಖಲಾಗಿರುವ ದೂರಿನಲ್ಲಿ 7 ಜನರಲ್ಲಿ ಇಬ್ಬರು ಮಹಿಳಾ ಕುಸ್ತಿಪಟುಗಳು ಹಲವು ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಕುರಿತು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕುಸ್ತಿಪಟುಗಳು ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಭರವಸೆ ನೀಡಿದರೆ ರಾಜೀನಾಮೆ ನೀಡಲು ಸಿದ್ಧ ಎಂದು ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
WFI Assistant Secretary Vinod Tomar Suspend: ಶುಕ್ರವಾರ ತಡರಾತ್ರಿ ನಡೆದ ಮ್ಯಾರಥಾನ್ ಸಭೆಯ ಕೊನೆಯಲ್ಲಿ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ಸೇರಿದಂತೆ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಉಸ್ತುವಾರಿ ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.