WhatsApp: ವಾಟ್ಸಾಪ್ ಇತ್ತೀಚಿನ ದಿನಗಳಲ್ಲಿ ಬಹುಮುಖ್ಯ ಸಂವಹನ ಮಾಧ್ಯಮವಾಗಿ ಜನಪ್ರಿಯವಾಗಿದೆ. ಅತ್ಯಂತ ಜನಪ್ರಿಯ ಅಪ್ಲಿಕೇಶನ್ ಆಗಿರುವ ವಾಟ್ಸಾಪ್ ನಲ್ಲಿ ವೈಯಕ್ತಿಕ ಚಾಟ್ ನಿಂದ ಹಿಡಿದು ಕಚೇರಿ ಕೆಲಸಗಳವರೆಗೆ ಹಲವು ಪ್ರಮುಖ ವಿಷಯಗಳ ಬಗ್ಗೆ ಸಂವಹನ ನಡೆಸಲಾಗಿರುತ್ತದೆ. ಹಾಗಾಗಿ, ಈ ಅಪ್ಲಿಕೇಷನ್ ಬಳಕೆದಾರರಿಗೆ ತಮ್ಮ ಮಾಹಿತಿಗಳನ್ನು ಗೌಪ್ಯವಾಗಿಡಲು ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಆದರೆ, ಹೆಂಡತಿ ಗಂಡನ ವಾಟ್ಸಾಪ್ ಚೆಕ್ ಮಾಡಬಹುದೇ? ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆಯೇ? ಈ ಬಗ್ಗೆ ಎಂದಾದರೂ ಯೋಚಿಸಿದ್ದೀರಾ?
ವಾಸ್ತವವಾಗಿ, ವಿವಾಹಿತ ದಂಪತಿಗಳ ನಡುವೆ ಯಾವುದೇ ಗುಟ್ಟು, ಮುಚ್ಚುಮರೆ ಇರಬಾರದು ಎನ್ನಲಾಗುತ್ತದೆ. ಲೋಕಾರೂಢಿಯಾಗಿ ಈ ಮಾತು ಅಕ್ಷರಶಃ ಸತ್ಯ. ಹಾಗಂತ, ಮದುವೆ ಆಧಾರದ ಮೇಲೆ ಗಂಡ ಅಥವಾ ಹೆಂಡತಿ ವೈಯಕ್ತಿಕ ಫೋನ್, ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಬಹುದೇ? ಈ ಕುರಿತಂತೆ ಕಾನೂನು ಏನು ಹೇಳುತ್ತದೆ ಎಂದು ತಿಳಿಯೋಣ...
ಇದನ್ನೂ ಓದಿ- ವಾಟ್ಸ್ ಆಪ್ ನಲ್ಲಿ ನಿಮ್ಮ ಖಾಸಗಿ ಚಾಟ್ ಗಳನ್ನು ಸುರಕ್ಷಿತವಾಗಿರಿಸಲು ಸಹಾಯ ಮಾಡುತ್ತೆ ಈ ಕೋಡ್!
ಮದುವೆ ಆಧಾರದ ಮೇಲೆ ಗಂಡ/ಹೆಂಡತಿ ಸಾಮಾಜಿಕ ಜಾಲತಾಣವನ್ನು ಛೇ ಮಾಡಬಹುದೇ? ಕಾನೂನು ಏನು ಹೇಳುತ್ತದೆ?
ಭಾರತೀಯ ಸಂವಿಧಾನದ ಆರ್ಟಿಕಲ್ 21 (ಗೌಪ್ಯತೆಯ ಹಕ್ಕು) ಅಡಿಯಲ್ಲಿ ಪ್ರತಿಯೊಬ್ಬರಿಗೂ ಖಾಸಗಿತನದ ಹಕ್ಕಿದೆ ಎಂದು ಕಾನೂನು ತಜ್ಞರು ಹೇಳುತ್ತಾರೆ. ಈ ಹಕ್ಕಿನ ಅಡಿಯಲ್ಲಿ, ಯಾವುದೇ ವ್ಯಕ್ತಿಯು ತನ್ನ ಸಂಗಾತಿಯ (ಹೆಂಡತಿ/ಗಂಡ) ಫೋನ್ ಅಥವಾ ಸಾಮಾಜಿಕ ಮಾಧ್ಯಮ ಖಾತೆಯನ್ನು ಅವರ ಅನುಮತಿಯಿಲ್ಲದೆ ಪರಿಶೀಲಿಸುವಂತಿಲ್ಲ. ಯಾವುದೇ ವ್ಯಕ್ತಿ ತಮ್ಮ ಸಂಗಾತಿಯ ಫೋನ್ ಅಥವಾ ಸಾಮಾಜಿಕ ಮಾಧ್ಯಮ ಖಾತೆಯನ್ನು ನೋಡಲು ಬಯಸಿದರೆ, ಅದಕ್ಕಾಗಿ ಅವರಿಂದ ಅನುಮತಿಯನ್ನು ತೆಗೆದುಕೊಳ್ಳಬೇಕು ಎಂದು ಹೇಳಲಾಗುತ್ತದೆ.
ಏನಿದು ಆರ್ಟಿಕಲ್ 21?
ಭಾರತೀಯ ಸಂವಿಧಾನದ ಆರ್ಟಿಕಲ್ 21 ಗೌಪ್ಯತೆಯ ಹಕ್ಕಿನ ಬಗ್ಗೆ ತಿಳಿಸುತ್ತದೆ. ಇದು ಪ್ರತಿಯೊಬ್ಬ ವ್ಯಕ್ತಿಯೂ ತಮ್ಮ ವೈಯಕ್ತಿಕ ವಿಷಯಗಳನ್ನು ಇತರರಿಂದ ಮರೆಮಾಡುವ ಹಕ್ಕನ್ನು ನೀಡುತ್ತದೆ. ಈ ಹಕ್ಕನ್ನು ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕು ಎಂದು ಗುರುತಿಸಲಾಗಿದೆ. 2017 ರಲ್ಲಿ, ಸುಪ್ರೀಂ ಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಗುರುತಿಸಿದೆ.
ಇದನ್ನೂ ಓದಿ- ಇನ್ಮುಂದೆ ವಾಟ್ಸ್ ಆಪ್ ಖಾತೆ ನಿರ್ವಹಿಸಲು ಫೋನ್ ನಂಬರ್ ಬೇಕಿಲ್ಲ... ಬರುತ್ತಿದೆ ಜಬರ್ದಸ್ತ್ ವೈಶಿಷ್ಟ್ಯ!
9 ನ್ಯಾಯಾಧೀಶರಿದ್ದ ಪೀಠದಿದ್ನ ಮಹತ್ವದ ತೀರ್ಪು:
ಸುಪ್ರೀಂ ಕೋರ್ಟಿನ 9 ನ್ಯಾಯಮೂರ್ತಿಗಳ ಪೀಠದಲ್ಲಿ ಈ ಬಗ್ಗೆ ಸರ್ವಾನುಮತದಿಂದ ತೀರ್ಪು ನೀಡಲಾಗಿದೆ. ಈ ಪೀಠದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್, ನ್ಯಾಯಮೂರ್ತಿ ಜೆ. ಚೆಲಮೇಶ್ವರ್, ನ್ಯಾಯಮೂರ್ತಿ ಎಸ್.ಎ. ಬೊಬ್ಡೆ, ನ್ಯಾಯಮೂರ್ತಿ ಆರ್.ಕೆ. ಅಗರ್ವಾಲ್, ನ್ಯಾಯಮೂರ್ತಿ ಆರ್. ಎಫ್. ನಾರಿಮನ್, ನ್ಯಾಯಮೂರ್ತಿ ಎ.ಎಂ. ಸಪ್ರೆ, ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಎಸ್ ಕೆ ಕೌಲ್ ಮತ್ತು ನ್ಯಾಯಮೂರ್ತಿ ಎಸ್ ಅಬ್ದುಲ್ ನಜೀರ್ ಅವರಿದ್ದರು.
ಈ ನಿರ್ಧಾರದ ನಂತರ, ಖಾಸಗಿತನದ ಹಕ್ಕು ಭಾರತದಲ್ಲಿ ಪ್ರಮುಖ ಹಕ್ಕಾಗಿದೆ. ಇದರ ಅಡಿಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ವೈಯಕ್ತಿಕ ವಿಚಾರಗಳ ಬಗ್ಗೆ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಹಕ್ಕನ್ನು ಹೊಂದಿರುತ್ತಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://youtu.be/--phA9ji8NM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.