ಟೆಲಿಗ್ರಾಮ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್‌... ಭಾರತದಲ್ಲಿ ಬ್ಯಾನ್‌ ಆಗುತ್ತಾ ಜನಪ್ರಿಯ ಮೆಸೇಜಿಂಗ್‌ ಆಪ್?‌

Telegram Ban in India: ಗೃಹ ವ್ಯವಹಾರಗಳ ಸಚಿವಾಲಯ (MHA) ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಈ ತನಿಖೆಯನ್ನು ನಡೆಸುತ್ತಿದೆ.  

Written by - Bhavishya Shetty | Last Updated : Aug 26, 2024, 04:24 PM IST
    • ಸುಲಿಗೆ ಮತ್ತು ಜೂಜಾಟದಂತಹ ಚಟುವಟಿಕೆಗಳಿಗೆ ಟೆಲಿಗ್ರಾಮ್ ಬಳಕೆ
    • ಅಪ್ಲಿಕೇಶನ್ ಅನ್ನು ತನಿಖೆ ನಡೆಸಲಾಗುತ್ತಿದೆ ಎಂದು ಮನಿ ಕಂಟ್ರೋಲ್ ವರದಿ
    • ಭಾರತದಲ್ಲಿ ಟೆಲಿಗ್ರಾಮ್ ನಿಷೇಧಿಸುವ ಸಾಧ್ಯತೆ ಬಗ್ಗೆ ಅಧಿಕಾರಿಯೊಬ್ಬರ ಸುಳಿವು
ಟೆಲಿಗ್ರಾಮ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್‌... ಭಾರತದಲ್ಲಿ ಬ್ಯಾನ್‌ ಆಗುತ್ತಾ ಜನಪ್ರಿಯ ಮೆಸೇಜಿಂಗ್‌ ಆಪ್?‌ title=
File Photo

Telegram Ban in India: ಸುಲಿಗೆ ಮತ್ತು ಜೂಜಾಟದಂತಹ ಚಟುವಟಿಕೆಗಳಿಗೆ ಟೆಲಿಗ್ರಾಮ್ ಬಳಸಲಾಗುತ್ತಿದೆ ಎಂಬ ಕಳವಳವನ್ನು ಭಾರತ ಸರ್ಕಾರವು ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯೆಲ್ಲಿ ಅಪ್ಲಿಕೇಶನ್ ಅನ್ನು ತನಿಖೆ ನಡೆಸಲಾಗುತ್ತಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ. ಇನ್ನು ಈ ತನಿಖೆಯ ಫಲಿತಾಂಶದ ಆಧಾರದಲ್ಲಿ ಭಾರತದಲ್ಲಿ ಟೆಲಿಗ್ರಾಮ್ ನಿಷೇಧಿಸುವ ಸಾಧ್ಯತೆ ಬಗ್ಗೆ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ.

ಗೃಹ ವ್ಯವಹಾರಗಳ ಸಚಿವಾಲಯ (MHA) ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ಈ ತನಿಖೆಯನ್ನು ನಡೆಸುತ್ತಿದೆ.

ಇದನ್ನೂ ಓದಿ: ಈ ಮೂರು ವಿಷಯಗಳನ್ನು ಗೂಗಲ್ʼನಲ್ಲಿ ಸರ್ಚ್ ಮಾಡಲೇಬಾರದು: ಅಪ್ಪಿತಪ್ಪಿ ಮಾಡಿದರಂತೂ ಜೈಲೇ ಗತಿ

ಟೆಲಿಗ್ರಾಮ್ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಆಗಸ್ಟ್ 24 ರಂದು ಪ್ಯಾರಿಸ್‌ʼನಲ್ಲಿ ಬಂಧಿಸಲಾಗಿತ್ತು. ಈ ಬೆಳವಣಿಗೆ ಬಳಿಕ ಭಾರತ ಸರ್ಕಾರ ತನಿಖೆಯ ನಿರ್ಧಾರವನ್ನು ತೆಗೆದುಕೊಂಡಿದೆ.

ಟೆಲಿಗ್ರಾಂ ಅಪ್ಲಿಕೇಶನ್‌ ಮಾಡರೇಶನ್ ನೀತಿಗಳನ್ನು ಅನುಸರಿಸುವಲ್ಲಿ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಲ್ಲದೆ, ಭಾರತದಲ್ಲಿ ಯುಜಿಸಿ-ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಟೆಲಿಗ್ರಾಮ್ ಭಾಗಿಯಾಗಿತ್ತು. ಈ ವಿವಾದ ವಿದ್ಯಾರ್ಥಿ ಪ್ರತಿಭಟನೆ ಮತ್ತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಕಾರಣವಾಗಿತ್ತು. ಜೊತೆಗೆ ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಟೆಲಿಗ್ರಾಂನಲ್ಲಿ 5,000 ರಿಂದ 10,000 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿತ್ತು.

ಇದನ್ನೂ ಓದಿ: Google Map Voice: ಗೂಗಲ್ ಮ್ಯಾಪ್​'ನಲ್ಲಿ ದಾರಿ ಸೂಚಿಸುವ ಮಹಿಳೆಯ ಧ್ವನಿ ಯಾರದ್ದು ಗೊತ್ತಾ?

ಇದೀಗ ಭಾರತ ಸರ್ಕಾರ ತನಿಖೆ ನಡೆಸುತ್ತಿದ್ದು, ಫಲಿತಾಂಶಗಳ ಆಧಾರದ ಮೇಲೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿ ಹೇಳಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews

 

 

 

 

Trending News