ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ ಕರ್ನಾಟಕ ಲೋಕ ಸೇವಾ ಆಯೋಗದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ನೇಮಕಾತಿಯು ಪಾರದರ್ಶಕವಾಗಿ ನಡೆಯುತ್ತದೆ. ಆದರೆ, ಕೆಪಿಎಸ್ಸಿ ನೇಮಕಾತಿಯು ಹಗರಣವಿಲ್ಲದೇ ನಡೆಯುವುದಿಲ್ಲ ಎಂದರು.