ಯೂಟ್ಯೂಬ್ ಚಾನೆಲ್ ಹೆಸರೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ ಐವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಮಂಡಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್ ಚಾನಲ್ನ ಅಭಿಲಾಷ್, ಮಣಿ, ಪ್ರದೀಪ್, ಬಸವರಾಜು, ನವೀನ್ ಕುಮಾರ್ ಬಂಧಿತರು. ಆರೋಪಿಗಳು ಮನೆಯೊಂದಕ್ಕೆ ದಾಳಿ ಮಾಡಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದೀರ ಎಂದು ಆರೋಪ ಮಾಡಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು.