ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವದ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. "ನಾನು ಕೆನಡಾದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ (ಪ್ರಥಮ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಪ್ರಪಂಚದ ಯಾವುದೇ ಸಂಸತ್ತಿನಲ್ಲಿ ಕನ್ನಡವನ್ನು ಮಾತನಾಡುವುದು ಇದೇ ಮೊದಲು" ಎಂದು ಕೆನಡಾ ಸಂಸದ ಚಂದ್ರ ಆರ್ಯ ಟ್ವೀಟ್ ಮಾಡಿದ್ದಾರೆ.
Chandra Arya : ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು