ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಭಾರೀ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಹಿರಿಯ ನಾಗರಿಕರಿಗೆ ರೈಲ್ವೆ ನೀಡಿರುವ ವಿನಾಯಿತಿ ಕುರಿತು ವಿಶೇಷ ಅಪ್ಡೇಟ್ ಹೊರಬಿದ್ದಿದೆ. ರೈಲು ಟಿಕೆಟ್ನಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ವಿನಾಯಿತಿಯನ್ನು ಮತ್ತೊಮ್ಮೆ ಜಾರಿಗೊಳಿಸಲಾಗುತ್ತಿದೆ. ಈ ಮೊದಲು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪುರುಷರು ಮತ್ತು 58 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಹಿಳೆಯರು ರೈಲ್ವೆ ಇಲಾಖೆ ವತಿಯಿಂದ ರೈಲು ಟಿಕೆಟ್ ದರಗಳಲ್ಲಿ ಭಾರೀ ರಿಯಾಯಿತಿಯ ಲಾಭವನ್ನು ಪಡೆಯುತ್ತಿದ್ದರು. ಅದನ್ನು ಮತ್ತೆ ಪ್ರಾರಂಭಿಸುವ ಸಾಧ್ಯತೆ ನಿಚ್ಚಳವಾಗತೊಡಗಿದೆ.