ಬೆಂಗಳೂರಿನ ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸಿಬಿಐ ವಿಚಾರಣೆ ಹಾಗೂ ದಾಖಲೆ ಪರಿಶೀಲನೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬೆಳಗಾವಿ ಕಾಂಗ್ರೆಸ್ ಭವನದ ಬಳಿ ನಿನ್ನೆ ಪ್ರತಿಕ್ರಿಯೆ ನೀಡಿದ್ರು. ಸಿಬಿಐ ಅಧಿಕಾರಿಗಳು ಬೆಂಗಳೂರಿನ ನಮ್ಮ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಹಾಗೂ ಟ್ರಸ್ಟಿಗಳನ್ನು ವಿಚಾರಣೆ ಮಾಡಿದ್ದಾರೆ. ಆದರೆ ಅವರು ಯಾವ ಮಾಹಿತಿ ಪಡೆದಿದ್ದಾರೆ ಗೊತ್ತಿಲ್ಲ. ಸರ್ಕಾರ ಅವರಿಗೆ ತನಿಖೆ ಮಾಡುವ ಅಧಿಕಾರ ಕೊಟ್ಟಿದ್ದು, ಅವರು ಏನು ಮಾಡುತ್ತಾರೋ ಮಾಡಲಿ. ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ನನ್ನ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿದ್ದರು. ಅವರಿಗೆ ಕಾನೂನಿನಲ್ಲಿ ಏನೆಲ್ಲಾ ಅವಕಾಶ ಇದೆಯೋ ಅದನ್ನು ಮಾಡಲಿ ಎಂದರು.