ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಈವರೆಗೂ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಕಾಫಿ ಹಣ್ಣು ಉದುರಲು ಆರಂಭಿಸಿದ್ದು, ಬೆಳೆಗಾರರು ಚಿಂತೆಗೊಳಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಿಂದಗೆರೆ ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.. ಈ ನಡುವೆ ಭಾರಿ ಮಳೆಗೆ ಹತ್ತಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಸಹ ಕಂಡು ಬಂದಿದೆ.