ಪೊಲೀಸ್ ಸಬ್-ಇನ್ಸ್ ಪೆಕ್ಟರ್(ಎಸ್ಐ) ತನ್ವೀರ್ ಹುಸೇನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ವಕೀಲರುರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ತಡರಾತ್ರಿ ನೂರಾರು ವಕೀಲರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಕಟ್ಟಡದ ಪ್ರವೇಶ ಮತ್ತು ನಿರ್ಗಮನ ಎರಡೂ ದ್ವಾರಗಳಿಗೆ ದಿಗ್ಭಂಧನ ಹಾಕಿದರು. ಧರಣಿ ನಿರತ ವಕೀಲರು ಎಸ್ಐ ಅವರನ್ನು ಅಮಾನತು ಮಾಡುವವರೆಗೂ ಇಲ್ಲಿಂದ ಕದಲುವುದಿಲ್ಲ ಮತ್ತು ಬುಧವಾರ ‘ವಿಧಾನಸೌಧ ಚಲೋ’ ಚಳವಳಿ ನಡೆಸುವುದಾಗಿ ಹೇಳಿದ್ದಾರೆ. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ ವಾರಣಾಸಿ ನ್ಯಾಯಾಧೀಶರ ವಿರುದ್ಧ ವಕೀಲ ಮತ್ತು ಎಸ್ಡಿಪಿಐ ಕಾರ್ಯಕರ್ತ ಚಾಂದ್ ಪಾಷಾ ಅವಹೇಳನಕಾರಿ ಪೋಸ್ಟ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಎಸ್ಐ ಹುಸೇನ್ ಅವರು 40 ವಕೀಲರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ.