Viral Video: ಟರ್ಕಿ-ಸಿರಿಯಾ ಭೂಕಂಪದಲ್ಲಿ ಪ್ರಾಣ ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ ತಂದೆ!

Turkey-Syria Earthquake: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಇದುವರೆಗೆ 17,500 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಸಾವಿನ ಸಂಖ್ಯೆ 18000ಕ್ಕೂ ಹೆಚ್ಚಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Written by - Puttaraj K Alur | Last Updated : Feb 9, 2023, 06:52 PM IST
  • ಟರ್ಕಿ ಮತ್ತು ಸಿರಿಯಾ ಭೂಕಂಪಕ್ಕೆ 17,500ಕ್ಕೂ ಹೆಚ್ಚು ಜನರು ಬಲಿ
  • ತನ್ನ ಪ್ರಾಣವನ್ನು ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ ತಂದೆ
  • ಸೋಷಿಯಲ್ ಮೀಡಿಯಾದಲ್ಲಿ ಹೃದಯ ವಿದ್ರಾವಕ ವಿಡಿಯೋ ವೈರಲ್
Viral Video: ಟರ್ಕಿ-ಸಿರಿಯಾ ಭೂಕಂಪದಲ್ಲಿ ಪ್ರಾಣ ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ ತಂದೆ! title=
ಕಂಪಕ್ಕೆ 17,500ಕ್ಕೂ ಹೆಚ್ಚು ಜನರು ಬಲಿ!

ನವದೆಹಲಿ: ಭೀಕರ ಭೂಕಂಪಕ್ಕೆ ಟರ್ಕಿ ಮತ್ತು ಸಿರಿಯಾ ನಲುಗಿಹೋಗಿವೆ. ಈ ದುರ್ಘಟನೆಯಲ್ಲಿ ಮೃತರಪಟ್ಟವರ ಸಂಖ್ಯೆ 7926ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯ ಚುರುಕುಗೊಳಿಸಲಾಗಿದ್ದು, ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಒಂದೊಂದಾಗಿ ಪತ್ತೆ ಹಚ್ಚಲಾಗುತ್ತಿದೆ.

ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಇದುವರೆಗೆ 17,500 ಜನರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಸಾವಿನ ಸಂಖ್ಯೆ 18000ಕ್ಕೂ ಹೆಚ್ಚಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಮಧ್ಯ ಸೋಷಿಯಲ್ ಮೀಡಿಯಾದಲ್ಲಿ ಹೃದಯ ವಿದ್ರಾವಕ ವಿಡಿಯೋವೊಂದು ಹರಿದಾಡುತ್ತಿದೆ.

ಇದನ್ನೂ ಓದಿ: ಟರ್ಕಿ- ಸಿರಿಯಾ ಭೂಕಂಪದಲ್ಲಿ ಸತ್ತವರ ಸಂಖ್ಯೆ 16,000ಕ್ಕೆ ಏರಿಕೆ ! ಎತ್ತ ನೋಡಿದರೂ ಆಘಾತಕಾರಿ ದೃಶ್ಯಗಳೇ !

ಈ ವಿಡಿಯೋ ನೋಡಿದ್ರೆ ಎಂಥವರ ಕಣ್ಣಲ್ಲಿಯೂ ನೀರು ಬರುತ್ತದೆ. ಭೂಕಂಪದ ಹೊಡೆತಕ್ಕೆ ಸಿಲುಕಿ ತಂದೆಯೊಬ್ಬ ತನ್ನ ಪ್ರಾಣವನ್ನು ಪಣಕ್ಕಿಟ್ಟು ಮಗುವಿನ ಜೀವವನ್ನು ಉಳಿಸಿದ್ದಾನೆ. ಭೂಕಂಪಕ್ಕೆ ಸಿಲುಕಿ ಕುಸಿದುಬಿದ್ದ ಮನೆಯ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯೊಬ್ಬ ತನ್ನ ಪ್ರಾಣ ಕಳೆದುಕೊಂಡರೂ ಮಗುವಿನ ಪ್ರಾಣ ಉಳಿಸಿದ್ದಾನೆ.

ಈ ಹೃದಯ ವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಸಖತ್ ವೈರಲ್ ಆಗುತ್ತಿದ್ದು, ನೋಡುಗರ ಕಣ್ಣಂಚಲ್ಲಿ ನೀರು ಬರುವಂತೆ ಮಾಡುತ್ತಿದೆ. Vinod Kapri ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸಾವಿರಾರು ಜನರು ವೀಕ್ಷಿಸಿದ್ದು, ಅನೇಕರು ಮರುಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral News: ಮೂವರು ಸಹೋದರಿಯರನ್ನ ಮದುವೆಯಾದ ಭೂಪ: ಒಬ್ಬೊಬ್ಬರಿಗೆ ಒಂದೊಂದು ದಿನ ಫಿಕ್ಸ್ ಮಾಡಿದ್ದಾನೆ ಈ ಚನ್ನಿಗರಾಯ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News