Bike Accident Viral Video: ಬೈಕ್ನಲ್ಲಿ ಕುಳಿತುಕೊಂಡು ರೀಲ್ಸ್ ಮಾಡಲು ಹೋಗಿ ಬೈಕ್ ಸವಾರನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಹೌದು, ರೀಲ್ಸ್ಗೆ ಪೋಸ್ ನೀಡಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಮಹಾರಾಷ್ಟ್ರದ ಧುಲೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಇದನ್ನೂ ಓದಿ: 37 ಸಾವಿರ ಕೋಟಿ ರೂ.ಗಳ ಒಡತಿ.. ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ.. ಕಾರಣ?
चलती बाइक पर रील बनाना दो युवकों को पड़ा महंगा..बाइक का हुआ एक्सीडेंट..बाइक चला रहे शख्स की हादसे में मौके पर ही मौत..जबकि रील बना रहा दूसरा शख्स गंभीर रुप से घायल..ये हादसा #Dhule-#Solapur हाईवे पर #Beed बाईपास पर हुआ..वीडियों शोशल मीडिया पर तेज़ी से हो रहा वायरल@indiatvnews pic.twitter.com/dG8mJm5Jbj
— Atul singh (@atuljmd123) July 6, 2024
ಬೈಕಿನ ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದ ಸ್ನೇಹಿತನ ರೀಲ್ಸ್ಗೆ ಚಾಲಕ ಪೋಸ್ ಕೊಡಲು ಹೋಗಿದ್ದಾನೆ. ಈ ವೇಳೆ ಗಾಡಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಂದಹಾಗೆ ವೈರಲ್ ಆಗಿರುವ ಈ ವಿಡಿಯೋದಲ್ಲಿ ಇಬ್ಬರು ಸ್ನೇಹಿತರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿದ್ದವ ರೀಲ್ಸ್ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್ ಚಾಲಕ ಹಿಂದಕ್ಕೆ ತಿರುಗಿ ಪೋಸ್ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಗಾಳಿಗೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಮಹಿಳೆಯರು ಹೂ ಮುಡಿದುಕೊಳ್ಳಲ್ಲ..! ಏಕೆ ಗೊತ್ತಾ?
@atuljmd123 ಎಂಬ ಟ್ವಿಟರ್ ಖಾತೆಯಲ್ಲಿ ಈ ಅಪಘಾತದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋ ಕಂಡ ನೂರಾರು ನೆಟಿಜನ್ಸ್ ʼಈ ರೀತಿಯ ರೀಲ್ಸ್ ಹುಚ್ಚು ಬಿಟ್ಟು ಬಿಡಿʼ ಎಂದು ಕಾಮೆಂಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.