ನಾಸಿರಿಯಾ: ಮೊದಲೇ ಯುದ್ಧ ಮತ್ತು ನಿರ್ಬಂಧಗಳಿಂದ ವಿನಾಶದತ್ತ ಮುಖ ಮಾಡಿದ್ದ ಇರಾಕ್ ಕರೋನವೈರಸ್ ಬಿಕ್ಕಟ್ಟನ್ನು (Coronavirus Crisis) ನಿಭಾಯಿಸಲು ಹೆಣಗಾಡುತ್ತಿದೆ. ದೇಶಾದ್ಯಂತ 1.4 ದಶಲಕ್ಷಕ್ಕೂ ಹೆಚ್ಚು ಸೋಂಕಿಗೆ ಒಳಗಾಗಿದ್ದರೆ 17,592 ಜನರನ್ನು ಬಲಿ ತೆಗೆದುಕೊಂಡಿದೆ. ಈ ಮಧ್ಯೆ ಇರಾಕ್‌ನ ದಕ್ಷಿಣ ನಗರವಾದ ನಾಸಿರಿಯಾದ ಕೋವಿಡ್ -19 ಆಸ್ಪತ್ರೆಯಲ್ಲಿ (COVID-19 Hospital) ಆಕ್ಸಿಜನ್ ಟ್ಯಾಂಕ್ ಸ್ಫೋಟದಿಂದಾಗಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು ಕನಿಷ್ಠ 44 ಜನರು ಸಾವನ್ನಪ್ಪಿದ್ದಾರೆ ಮತ್ತು 67 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ಸೋಮವಾರ (ಜುಲೈ 12) ತಿಳಿಸಿದ್ದಾರೆ.
ಕೋವಿಡ್ -19 ಆಸ್ಪತ್ರೆಯಲ್ಲಿ (COVID-19 Hospital) ಸಂಭವಿಸಿರುವ ಈ ಅಪಘಾತದಲ್ಲಿ ಇನ್ನೂ ಅಧಿಕ ಮಂದಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಮಧ್ಯೆ ಪ್ರಧಾನಿ ಮುಸ್ತಫಾ ಅಲ್-ಕಧಿಮಿ (Prime Minister Mustafa al-Kadhimi) ಹಿರಿಯ ಮಂತ್ರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು ನಾಸಿರಿಯಾದಲ್ಲಿ ಆರೋಗ್ಯ ಮತ್ತು ನಾಗರಿಕ ರಕ್ಷಣಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿ ಬಂಧಿಸುವಂತೆ ಆದೇಶಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಆಸ್ಪತ್ರೆಯ ವ್ಯವಸ್ಥಾಪಕರನ್ನು ಸಹ ಅಮಾನತುಗೊಳಿಸಲಾಗಿದೆ ಮತ್ತು ಬಂಧಿಸಲು ಆದೇಶಿಸಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ- Corona Vaccine: ಲಸಿಕೆ ಹಾಕಿಸಿಕೊಂಡ ಬಳಿಕ ಮೂರು ದಿನಗಳ ಕಾಲ ಸಂಗಾತಿಯ ಜೊತೆಗೆ ಸಂಬಂಧ ಬೆಳೆಸಬೇಡಿ-ತಜ್ಞರು
ಆಕ್ಸಿಜನ್ ಟ್ಯಾಂಕ್ ಸ್ಫೋಟದಿಂದಾಗಿ ಆಸ್ಪತ್ರೆಯಲ್ಲಿ ಭಾರೀ ಹೊಗೆ ಆವರಿಸಿತ್ತು. ಹೊಗೆ ಹೆಚ್ಚಾಗಿದ್ದರಿಂದ ಅನೇಕ ರೋಗಿಗಳು ಕೆಮ್ಮುತ್ತಿದ್ದರು ಆರೋಗ್ಯ ಸಿಬ್ಬಂದಿ ರೋಗಿಗಳನ್ನು ಆಸ್ಪತ್ರೆಯಿಂದ ಹೊರಗೆ ಕೊಂಡೊಯ್ಯುತ್ತಿರುವ ದೃಶ್ಯಗಳು ಕಂಡು ಬಂದವು ಎಂದು ರಾಯಿಟರ್ಸ್ ವರದಿಗಾರರೊಬ್ಬರು ತಿಳಿಸಿದ್ದಾರೆ.
ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್ ಹುಸೇನ್ ಕರೋನವೈರಸ್ (Coronavirus) ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ, ಆದರೆ ದಟ್ಟ ಹೊಗೆಯಿಂದಾಗಿ ಕೆಲವು ವಾರ್ಡ್‌ಗಳಿಗೆ ಪ್ರವೇಶಿಸಲು ಕಷ್ಟವಾಗುತ್ತಿದೆ ಎಂದು ನಾಸಿರಿಯಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪೋಟದಿಂದಾಗಿ ಸಂಭವಿಸಿದ ಬೆಂಕಿಯ ಕೆನ್ನಾಲಿಗೆ ಆಸ್ಪತ್ರೆಯನ್ನು ಆವರಿಸಿದ್ದು ಕರೋನವೈರಸ್ ವಾರ್ಡ್‌ನೊಳಗೆ ಅನೇಕ ರೋಗಿಗಳು ಸಿಲುಕಿದ್ದಾರೆ ಮತ್ತು ರಕ್ಷಣಾ ತಂಡಗಳು ಅವರನ್ನು ತಲುಪಲು ಹೆಣಗಾಡುತ್ತಿವೆ ಎಂದು ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯ ಕಟ್ಟಡವನ್ನು ಪ್ರವೇಶಿಸುವ ಮೊದಲು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದರು.
ಇದನ್ನೂ ಓದಿ- Study: ಈ ಜನರು Coronavirus ಸೋಂಕಿಗೆ ಗುರಿಯಾಗುವ ಸಾಧ್ಯತೆ ಹೆಚ್ಚು ಎನ್ನುತ್ತೆ ಸಂಶೋಧನೆ!
ಆಸ್ಪತ್ರೆಯ ಕೋವಿಡ್ -19 (COVID-19) ವಾರ್ಡ್‌ಗಳ ಒಳಗೆ ಆಮ್ಲಜನಕ ಟ್ಯಾಂಕ್ ಸ್ಫೋಟ ಸಂಭವಿಸಿರುವುದು ಬೆಂಕಿಗೆ ಕಾರಣ ಎಂದು ಪ್ರಾಥಮಿಕ ಪೊಲೀಸ್ ವರದಿಗಳು ಸೂಚಿಸಿವೆ ಎಂದು ಘಟನಾ ಸ್ಥಳದಲ್ಲಿದ್ದ ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ ಆಸ್ಪತ್ರೆಯಲ್ಲಿದ್ದ ಇನ್ನೂ ಕೆಲವರು ಪತ್ತೆಯಾಗದೇ ಇರುವುದರಿಂದ ಬೆಂಕಿಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಬಹುದು ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಮೃತಪಟ್ಟವರಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ ಎಂದು ಅವರು ಹೇಳಿದರು.
ಕೋಪಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.