ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ

ಕನ್ಸರ್ವೇಟಿವ್ ಪಕ್ಷದ ನೇತೃತ್ವದ ಸರ್ಕಾರವು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ಬೆನ್ನಲ್ಲೇ ಈಗ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರದಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Last Updated : Jul 7, 2022, 10:35 PM IST
  • ಜಾನ್ಸನ್ ಅವರ ಸಂಪುಟದಲ್ಲಿ ಹಲವಾರು ಸಚಿವರು ರಾಜೀನಾಮೆ ನೀಡಿದ ನಂತರವು ಅವರು ಅಧಿಕಾರಕ್ಕೆ ಅಂಟಿಕೊಂಡಿದ್ದರು.
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ title=
file photo

ಲಂಡನ್: ಕನ್ಸರ್ವೇಟಿವ್ ಪಕ್ಷದ ನೇತೃತ್ವದ ಸರ್ಕಾರವು ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ಬೆನ್ನಲ್ಲೇ ಈಗ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರದಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇದೆ ವೇಳೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಜಾನ್ಸನ್, ನೂತನ ಪ್ರಧಾನಿ ನೇಮಕವಾಗುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : IB Recruitment 2022 : ಗುಪ್ತಚರ ಇಲಾಖೆಯಲ್ಲಿ 766 ಹುದ್ದೆಗಳಿಗೆ ಅರ್ಜಿ : ಹೆಚ್ಚಿನ ಮಾಹಿತಿಗೆ ಇಲ್ಲಿ ನೋಡಿ!

ಅವರ ಆಪ್ತ ಮಿತ್ರರಲ್ಲಿ ಒಬ್ಬರಾದ ನಧಿಮ್ ಜಹಾವಿ ಅವರು ದೇಶದ ಒಳಿತಿಗಾಗಿ ಪ್ರಧಾನಿಗೆ ರಾಜೀನಾಮೆ ನೀಡುವಂತೆ ಮನವಿ ಮಾಡಿದ ನಂತರ ಜಾನ್ಸನ್ ಅವರು ಪ್ರಧಾನಿ ಹುದ್ದೆಯಿಂದ ನಿರ್ಗಮಿಸಿದ್ದಾರೆ ಎಂದು ಮಾಧ್ಯಮಗಳು ವರೆದಿ ಮಾಡಿವೆ.

ಇದನ್ನೂ ಓದಿ : Railway Recruitment 2022 : SSLC ಪಾಸಾದವರಿಗೆ ಸಿಹಿ ಸುದ್ದಿ : ರೈಲ್ವೆಯಲ್ಲಿ 1600 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅರ್ಜಿ!

ಜಾನ್ಸನ್ ಅವರ ಸಂಪುಟದಲ್ಲಿ ಹಲವಾರು ಸಚಿವರು ರಾಜೀನಾಮೆ ನೀಡಿದ ನಂತರವು ಅವರು ಅಧಿಕಾರಕ್ಕೆ ಅಂಟಿಕೊಂಡಿದ್ದರು. ಬುಧುವಾರದಂದು ಸಂಸತ್ತಿನಲ್ಲಿ ಮಾತನಾಡುತ್ತಾ ಅವರು ಒಂದು ವೇಳೆ ಸರ್ಕಾರವನ್ನು ನಡೆಸಲು ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.ಅದಕ್ಕೂ ಮೊದಲು ಅವರು ತಮಗೆ ಜನರ ಬೆಂಬಲವಿದೆ ಆದ್ದರಿಂದ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.

ಸುನಕ್ ಸೇರಿದಂತೆ ಕನಿಷ್ಠ 32 ಬ್ರಿಟಿಷ್ ಸಂಸದರು ರಾಜೀನಾಮೆ ನೀಡಿದ್ದರು, ಇದಾದ ನಂತರ ಅಲ್ಪಮತಕ್ಕೆ ಅವರ ಸರ್ಕಾರವು ಕುಸಿದಿತ್ತು, ಇದರಿಂದಾಗಿ ಬ್ರಿಟನ್ ನಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದ್ದರಿಂದಾಗಿ ಅವರು ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು ಎಂದು ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News