ಲಂಡನ್: ಸೀಟ್ ಬೆಲ್ಟ್ ಧರಿಸದೇ ಕಾರಿನಲ್ಲಿ ಪ್ರಯಾಣಿಸಿ ಸಂಚಾರಿ ನಿಯಮ ಉಲ್ಲಂಘಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ಗೆ ಪೊಲೀಸರು ದಂಡ ವಿಧಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಲೈವ್ ವಿಡಿಯೋ ಮಾಡುವ ವೇಳೆ ರಿಷಿ ಸುನಕ್ ಸೀಟ್ಬೆಲ್ಟ್ ಧರಿಸದೇ ಕಾರಿನ ಹಿಂಬದಿ ಸೀಟ್ನಲ್ಲಿ ಕುಳಿತಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಇದನ್ನು ಗಮನಿಸಿದ ಬ್ರಿಟನ್ ಪೊಲೀಸರು ರಿಷಿಗೆ ದಂಡ ವಿಧಿಸಿದ್ದು, ಬ್ರಿಟನ್ ಪಿಎಂ ಮುಜುಗರ ಅನುಭವಿಸಿದ್ದಾರೆ.
ಇದನ್ನೂ ಓದಿ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ : ಏರ್ ಇಂಡಿಯಾಗೆ 30 ಲಕ್ಷ ದಂಡ!
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಷಿ ಸುನಕ್, ‘ಇದು ತಿಳುವಳಿಕೆಯ ಸಣ್ಣ ಪ್ರಮಾದ’ ಎಂದು ಹೇಳಿದ್ದಾರೆ. ಉತ್ತರ ಇಂಗ್ಲೆಂಡ್ನಲ್ಲಿ ಕಾರಿನಲ್ಲಿ ಪ್ರಯಾಣಿಸುವ ವೇಳೆ ಈ ಘಟನೆ ನಡೆದಿದೆ. ಇದು ರಿಷಿಯವರಿಗೆ ವಿಧಿಸಿದ 2ನೇ ದಂಡವಾಗಿದೆ. ಕಳೆದ ವರ್ಷ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅಂದಿನ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿ ರಿಷಿಗೆ ದಂಡ ವಿಧಿಸಲಾಗಿತ್ತು.
ಟ್ರಾಫಿಕ್ ನಿಯಮ ಉಲ್ಲಂಘಿಸಿರುವ ಬಗ್ಗೆ ತಪ್ಪಾಗಿದೆ ಎಂದು ಪ್ರಧಾನಿ ರಿಷಿ ಸುನಕ್ ತಪ್ಪು ಒಪ್ಪಿಕೊಂಡಿದ್ದು, ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. ರಿಷಿಯವರು ಬ್ರಿಟನ್ ಪೊಲೀಸರು ವಿಧಿಸರುವ ದಂಡವನ್ನು ಖಂಡಿತ ಪಾವತಿಸಲಿದ್ದಾರೆ ಎಂದು ಅವರ ಡೌನಿಂಗ್ ಸ್ಟ್ರೀಟ್ ಕಚೇರಿ ವಕ್ತಾರರು ತಿಳಿಸಿದ್ದಾರೆ.
ಇದನ್ನೂ ಓದಿ: Periods Leave: ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರದ ಆದೇಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.