ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸರ್ಕಾರದ ಮುಖ್ಯಸ್ಥರ ಮಂಡಳಿಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭಾರತಕ್ಕೆ ಆಹ್ವಾನಿಸಲಾಗುವುದು ಎಂದು ಸರ್ಕಾರ ಗುರುವಾರ ತಿಳಿಸಿದೆ.
"ಎಸ್ಸಿಒ ಸ್ಥಾಪಿತ ನಿಯಮ ಮತ್ತು ಕಾರ್ಯವಿಧಾನದ ಪ್ರಕಾರ ಎಸ್ಸಿಒದ ಎಲ್ಲಾ 8 ಸದಸ್ಯರು, ಹಾಗೆಯೇ 4 ವೀಕ್ಷಕ ರಾಷ್ಟ್ರಗಳು ಮತ್ತು ಇತರ ಅಂತರರಾಷ್ಟ್ರೀಯ ಸಂವಾದ ಪಾಲುದಾರರನ್ನು ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗುವುದು" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದರು.
ಎಸ್ಸಿಒ ಸರ್ಕಾರದ ಮುಖ್ಯಸ್ಥರ ಮಂಡಳಿಯ ಸಭೆಯನ್ನು ಭಾರತ ಮೊದಲ ಬಾರಿಗೆ ಆಯೋಜಿಸುತ್ತಿದೆ.