PM Modi Visit To US: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಅಮೆರಿಕ ಸಜ್ಜಾಗಿದೆ. ಪ್ರಧಾನಿ ಮೋದಿ ಜೂನ್ 20 ರಂದು ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಈ ಪ್ರವಾಸಕ್ಕೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತೊಮ್ಮೆ ಮಾಹಿತಿಯನ್ನು ಹಂಚಿಕೊಂಡಿದೆ. ಇದರಲ್ಲಿ ಪ್ರಧಾನಿ ಮೋದಿ ಯಾವಾಗ ಅಮೆರಿಕಕ್ಕೆ ತಲುಪುತ್ತಾರೆ ಮತ್ತು ಅಲ್ಲಿ ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಎಂಬುದರ ಮಾಹಿತಿಯನ್ನು ಅದು ನೀಡಿದೆ. ಈ ಭೇಟಿಯ ಕುರಿತು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿರುವ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಪ್ರಧಾನಿ ಮೋದಿಯವರ ಈ ಭೇಟಿ ಬಹಳ ತುಂಬಾ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಜೂನ್ 20 ರಿಂದ 25 ರವರೆಗೆ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸದಲ್ಲಿರಲಿದ್ದಾರೆ.
ಶ್ವೇತಭವನದಲ್ಲಿ ಸ್ವಾಗತ
ಜೂನ್ 22 ರಂದು ಪ್ರಧಾನಿ ಮೋದಿ ಅವರನ್ನು ಶ್ವೇತಭವನದಲ್ಲಿ ಸ್ವಾಗತಿಸಲಾಗುವುದು ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ. ಇದಾದ ಬಳಿಕ ಉಭಯ ನಾಯಕರ ನಡುವೆ ನಿಯೋಗ ಮಟ್ಟದ ದ್ವಿಪಕ್ಷೀಯ ಸಭೆ ನಡೆಯಲಿದೆ. ಇದಾದ ಬಳಿಕ ಪ್ರಧಾನಿ ಮೋದಿ ಅವರು ಯುಎಸ್ ಕಾಂಗ್ರೆಸ್ ಉದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರು ಪ್ರಧಾನಿ ಮೋದಿ ಅವರಿಗೆ ಔತಣಕೂಟವನ್ನು ಏರ್ಪಡಿಸಲಿದ್ದಾರೆ. ಇದಲ್ಲದೇ ಹಲವು ದೊಡ್ಡ ಕಂಪನಿಗಳ ಅಧಿಕಾರಿಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ.
ಇದನ್ನೂ ಓದಿ-PM Modi US Visit: ಪ್ರಧಾನಿ ಮೋದಿ ಅಮೆರಿಕಾ ಪ್ರವಾಸಕ್ಕೆ ಅಡ್ಡಿಪಡಿಸಲು ಐಎಸ್ಐ ನೀಚ ಸಂಚು ಬಹಿರಂಗ
ಪ್ರಧಾನಿ ಮೋದಿ ಅವರ ಈ ಐತಿಹಾಸಿಕ ಭೇಟಿಯು ಅಮೆರಿಕ ಮತ್ತು ಭಾರತ ನಡುವಿನ ಸಂಬಂಧದಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹೇಳಿದ್ದಾರೆ. ಇದು ಯುನೈಟೆಡ್ ಸ್ಟೇಟ್ಸ್ ಆಳವಾಗಿ ಆಸಕ್ತಿ ಹೊಂದಿರುವ ಪ್ರಯಾಣವಾಗಿದೆ ಎಂದು ಅವರು ಹೇಳಿದ್ದಾರೆ. ಈ ಪ್ರವಾಸವು ಉಭಯ ದೇಶಗಳ ನಡುವೆ ರಕ್ಷಣಾ ಮತ್ತು ಕೈಗಾರಿಕಾ ಮಾರ್ಗಸೂಚಿಯನ್ನು ನಿರ್ಮಿಸಲಿದೆ.
ಪ್ರಧಾನಿ ಮೋದಿ ಈಜಿಪ್ಟ್‌ಗೂ ಭೇಟಿ ನೀಡಲಿದ್ದಾರೆ
ಅಮೆರಿಕ ಭೇಟಿಯ ನಂತರ ಪ್ರಧಾನಿ ಮೋದಿ ಅವರ ಈಜಿಪ್ಟ್ ಭೇಟಿಯ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ಅವರು ಮಾಹಿತಿ ನೀಡಿದ್ದಾರೆ. ಜೂನ್ 24-25 ರಂದು ಪ್ರಧಾನಿ ಮೋದಿ ಅವರು ಈಜಿಪ್ಟ್ ಪ್ರವಾಸದಲ್ಲಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದು ಪ್ರಧಾನಿ ಮೋದಿಯವರ ಮೊದಲ ಈಜಿಪ್ಟ್ ಭೇಟಿಯಾಗಿದೆ. ಇದು 1997 ರ ನಂತರ ಯಾವುದೇ ಭಾರತೀಯ ಪ್ರಧಾನಿಯ ಮೊದಲ ಅಧಿಕೃತ ದ್ವಿಪಕ್ಷೀಯ ಭೇಟಿಯಾಗಲಿದೆ. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಅಲ್-ಸಿಸಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸಿದ್ದರು, ಆಗ ಅವರು ಪ್ರಧಾನಿ ಮೋದಿಯವರನ್ನು ತಮ್ಮ ದೇಶಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು, ಅದನ್ನು ಪ್ರಧಾನಿ ಮೋದಿ ಒಪ್ಪಿಕೊಂಡಿದ್ದಾರೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.