PM Modi On Russia Ukraine War In SCO: ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ವಿರುದ್ಧದ ಯುದ್ಧದ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಇದು ಯುದ್ಧದ ಸಮಯವಲ್ಲ ಎಂದು ಪುಟಿನ್‌ಗೆ ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನಲಾಗಿದೆ. ಸಮರ್‌ಕಂಡ್‌ನಲ್ಲಿ ಶುಕ್ರವಾರ ನಡೆದ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಪ್ರಧಾನಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಇದು ಯುದ್ಧದ ಸಮಯವಲ್ಲ ಎಂದು ನನಗೆ ತಿಳಿದಿದೆ ಮತ್ತು ನಾನು ಈ ಬಗ್ಗೆ ನಿಮ್ಮೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ಶಾಂತಿಯ ಹಾದಿಯಲ್ಲಿ ನಾವು ಹೇಗೆ ಮುನ್ನಡೆಯಬಹುದು ಎಂಬುದರ ಕುರಿತು ಮಾತನಾಡಲು ಇಂದು ನಮಗೆ ಅವಕಾಶ ಇದೆ. ಭಾರತ-ರಷ್ಯಾ ಹಲವು ದಶಕಗಳಿಂದ ಪರಸ್ಪರ ಬಾಂಧವ್ಯ ಹೊಂದಿವೆ.
ಇದನ್ನೂ ಓದಿ-Shanghai Cooperation Organisation: ಭಾರತಕ್ಕೆ ಬೆಂಬಲ ನೀಡಲು ಮುಂದಾದ ಚೀನಾ..!
ಉಕ್ರೇನ್ ಯುದ್ಧದ ಬಗ್ಗೆ ಪ್ರಧಾನಿ ಮೋದಿಗೆ ಪುಟಿನ್ ಹೇಳಿದ್ದೇನು?
ದ್ವಿಪಕ್ಷೀಯ ಸಭೆಯ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ಪ್ರಧಾನಿ ಮೋದಿಯವರಿಗೆ ಉಕ್ರೇನ್‌ನಲ್ಲಿನ ಸಂಘರ್ಷ ಮತ್ತು ನಿಮ್ಮ ಕಳವಳಗಳ ಬಗ್ಗೆ ನಿಮ್ಮ ನಿಲುವಿನ ಬಗ್ಗೆಯೂ ನನಗೆ ತಿಳಿದಿದೆ ಎಂದು ಹೇಳಿದ್ದಾರೆ. ಇದೆಲ್ಲವೂ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ನಾವು ಬಯಸುತ್ತೇವೆ. ಅಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ನಾವು ನಿಮಗೆ ತಿಳಿಸುತ್ತೇವೆ. ಪುಟಿನ್ ಅವರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ, 'ಯುದ್ಧ ವಲಯದಿಂದ ನಮ್ಮ ವಿದ್ಯಾರ್ಥಿಗಳನ್ನು ರಕ್ಷಿಸಲು ನೀಡಿದ ಸಹಕಾರಕ್ಕಾಗಿ ನಾನು ನಿಮಗೆ (ಪುಟಿನ್) ಮತ್ತು ಉಕ್ರೇನ್ ಅಧ್ಯಕ್ಷರಿಗೆ ಧನ್ಯವಾದ ಹೇಳುತ್ತೇನೆ' ಎಂದು ಹೇಳಿದ್ದಾರೆ.
#WATCH | I know about your position on the conflict in Ukraine & also about your concerns. We want all of this to end as soon as possible. We will keep you abreast of what is happening there: Russian President Putin during a bilateral meet with PM Modi
(Source: DD) pic.twitter.com/jkSBQzcqtO
— ANI (@ANI) September 16, 2022
ಇದನ್ನೂ ಓದಿ-ಸುಟ್ಟು ಕರಕಲಾದ ಬೃಹತ್ ಕಟ್ಟಡ : ಭಯಾನಕವಾಗಿದೆ ದೃಶ್ಯ..!
ಹಲವು ವಿಷಯಗಳ ಬಗ್ಗೆ ಚರ್ಚೆ
ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ಮಾಸ್ಕೋ ಮಿಲಿಟರಿ ಪದೇ ನಡೆಸಿದ ಆಕ್ರಮಣದ ಬಳಿಕ ಪ್ರಧಾನಿ ಮೋದಿ ಮತ್ತು ಪುಟಿನ್ ನಡುವಿನ ಮೊದಲ ಮುಖಾಮುಖಿ ಭೇಟಿ ಇದಾಗಿದೆ. ಸಭೆಯಲ್ಲಿ, ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಉಕ್ರೇನ್ ಮೇಲೆ ದಾಳಿ ಮಾಡಿದ್ದಕ್ಕಾಗಿ ರಷ್ಯಾವನ್ನು ಭಾರತ ಇನ್ನೂ ಟೀಕಿಸಿಲ್ಲ ಎಂಬುದು ಇಲ್ಲಿ ಗಮನಾರ್ಹ. ಆದರೆ ಭಾರತ ಸರ್ಕಾರವು ಮಾತುಕತೆಯ ಮೂಲಕ ಬಿಕ್ಕಟ್ಟನ್ನು ಪರಿಹರಿಸಲು ನಿರಂತರ ಒತ್ತು ನೀಡುತ್ತಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.