SCO Summit 2022: ಉಜ್ಬೇಕಿಸ್ತಾನದ ಸಮರ್ಕಂಡ್‌ನಲ್ಲಿ SCO ಶೃಂಗಸಭೆ 2022 ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು SCO ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಮತ್ತು ಇತರರು ಸಮರ್ಕಂದ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಗುಂಪು ಫೋಟೋಗೆ ಪೋಸ್ ನೀಡಿದ್ದಾರೆ.
Prime Minister Narendra Modi, Chinese President Xi Jinping, Russian President Vladimir Putin, Pakistan PM Shehbaz Sharif, Uzbek President Shavkat Mirziyoyev & other leaders pose for a group photograph at Shanghai Cooperation Organisation (SCO ) Summit in Uzbekistan's Samarkand pic.twitter.com/RaTuXFhS3J
— ANI (@ANI) September 16, 2022
ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ
ಸಮರ್ಕಂದ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ 2022 ರ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ ಎಂಬುದು ಇಲ್ಲಿ ಗಮನಾರ್ಹ. ಪ್ರಧಾನಿ ಮೋದಿ ಮತ್ತು ವ್ಲಾದಿಮಿರ್ ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಇದಲ್ಲದೆ, ಪ್ರಧಾನಿ ಮೋದಿ ಅವರು ಇರಾನ್ ಮತ್ತು ಉಜ್ಬೇಕಿಸ್ತಾನ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ಕೂಡ ನಡೆಸಲಿದ್ದಾರೆ.
ಇದನ್ನೂ ಓದಿ-ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ..!
SCO ಶೃಂಗಸಭೆಯ ಶೆಡ್ಯೂಲ್ ಇಂತಿದೆ
>> ಮಧ್ಯಾಹ್ನ 12.10ಕ್ಕೆ ಜಂಟಿ ಫೋಟೋ ಸೆಷನ್ ಇರುತ್ತದೆ.
>> ಮಧ್ಯಾಹ್ನ 12.15 ರಿಂದ 2.45 ರವರೆಗೆ ಸಮರ್ಕಂದ್ ಘೋಷಣಾ ಪತ್ರಕ್ಕೆ ಸಹಿ.
>> ಮಧ್ಯಾಹ್ನ 3.45 ರಿಂದ 4.00 ರವರೆಗೆ ಉಜ್ಬೇಕಿಸ್ತಾನ್ ಅಧ್ಯಕ್ಷರ ಪರವಾಗಿ ಪ್ರಧಾನಿ ಮೋದಿ ಅಧಿಕೃತ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ.
>> ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಮರ್ಕಂದ್ ರೀಜೆನ್ಸಿ ಹೋಟೆಲ್‌ನಲ್ಲಿ ಸಂಜೆ 4:10 ರಿಂದ 4.45 ರವರೆಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
>> ಸಂಜೆ 4:50 ರಿಂದ 5:20 ರವರೆಗೆ ಉಜ್ಬೇಕಿಸ್ತಾನ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆ ನಡೆಯಲಿದೆ. ಕಾಂಗ್ರೆಸ್ ಸೆಂಟರ್ ನಲ್ಲಿ ಇದನ್ನು ಆಯೋಜಿಸಲಾಗಿದೆ.
>> ಸಂಜೆ 5.30ರಿಂದ 6ರವರೆಗೆ ಇರಾನ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆ ನಡೆಯಲಿದೆ.
>> ಪ್ರಧಾನಿ ಮೋದಿ ಸಂಜೆ 7.20ಕ್ಕೆ ದೆಹಲಿಗೆ ವಾಪಸ್ಸಾಗಲಿದ್ದಾರೆ. ರಾತ್ರಿ 10.15ಕ್ಕೆ ಪ್ರಧಾನಿ ಮೋದಿ ದೆಹಲಿಗೆ ತಲುಪಲಿದ್ದಾರೆ.
ಇದನ್ನೂ ಓದಿ-ಚೀನಾ, ರಷ್ಯಾ ಜೊತೆ ಭಾರತ ದೋಸ್ತಿ...! ಅಮೇರಿಕಾ ಹೇಳಿದ್ದೇನು?
ಶೃಂಗಸಭೆಗೆ ತೆರಳುವ ಮುನ್ನ ಮಾತನಾಡಿದ್ದ ಪ್ರಧಾನಿ ಮೋದಿ ಸಾಮಾಜಿಕ, ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ. ಈ ಶೃಂಗಸಭೆಯ ವಿಸ್ತರಣೆ ಮತ್ತು ಸಂಸ್ಥೆಯೊಳಗೆ ಬಹುಮುಖಿ ಮಾತು ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದ್ದರು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.