ನವದೆಹಲಿ: ಶ್ರೀಲಂಕಾದ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ ನಂತರ ಅವರು ಮತ್ತು ಅವರ ಕುಟುಂಬ ಸದಸ್ಯರು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವರದಿಗಳು ಇತ್ತೀಚೆಗೆ ಹರಿದಾಡಿತ್ತು. ಈ ಬಗ್ಗೆ ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ ಸ್ಪಷ್ಟನೆ ನೀಡಿದ್ದು "ಇದು ಸುಳ್ಳು ಸುದ್ದಿ" ಎಂದು ಹೇಳಿದೆ.
ಇದನ್ನು ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು.. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ
"ಕೆಲವು ರಾಜಕೀಯ ವ್ಯಕ್ತಿಗಳು ಮತ್ತು ಅವರ ಕುಟುಂಬಗಳು ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂಬ ವದಂತಿಗಳು ಮಾಧ್ಯಮಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವುದನ್ನು ಹೈಕಮಿಷನ್ ಇತ್ತೀಚೆಗೆ ಗಮನಿಸಿದೆ. ಇದು ನಕಲಿ ಸುದ್ದಿ ಮತ್ತು ಸ್ಪಷ್ಟವಾದ ಸುಳ್ಳು ವರದಿಗಳು. ಈ ವಿಚಾರವನ್ನು ಹೈಕಮಿಷನ್ ಬಲವಾಗಿ ನಿರಾಕರಿಸುತ್ತದೆ" ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಶ್ರೀಲಂಕಾದಲ್ಲಿ ಆರ್ಥಿಕ ಪ್ರಕ್ಷುಬ್ಧತೆಯ ನಡೆಯುತ್ತಿರುವ ಮಧ್ಯೆಯೇ ಮಹಿಂದಾ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ಸೋಮವಾರದಂದು ರಾಜೀನಾಮೆ ನೀಡಿದ್ದರು. ತಮ್ಮ ಅಧಿಕೃತ ನಿವಾಸ ಟೆಂಪಲ್ ಟ್ರೀಸ್‌ನಿಂದ ಮಂಗಳವಾರ ತೆರಳಿದ್ದು, ಆ ಬಳಿಕ ಅವರು ಎಲ್ಲಿ ವಾಸವಾಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಇನ್ನೊಂದೆಡೆ ಟ್ರಿಂಕೋಮಲಿಯ ಪೂರ್ವ ಬಂದರು ಜಿಲ್ಲೆಯ ನೌಕಾನೆಲೆಯಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂಬ ವರದಿಗಳೂ ಇವೆ.
ಇದನ್ನು ಓದಿ: ಈ ಹಳ್ಳಿಯ ಜನರು ಮಲಗಿದರೆ ತಿಂಗಳಾನುಗಟ್ಟಲೆ ಏಳುವುದೇ ಇಲ್ಲವಂತೆ.! ಕಾರಣ ?
ಇವೆಲ್ಲದರ ಮಧ್ಯೆ, ಶ್ರೀಲಂಕಾದ ನಾಗರಿಕ ವಿಮಾನಯಾನ ಪ್ರಾಧಿಕಾರದ ಮಹಾನಿರ್ದೇಶಕ ಮತ್ತು ಸಿಇಒ ಕ್ಯಾಪ್ಟನ್ ಥೆಮಿಯಾ ಅಬೆವಿಕ್ರಮ ಅವರು "ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ವರದಿಗಳು ಸುಳ್ಳು" ಎಂದು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.