ಕೊಲಂಬೋ: ಈಸ್ಟರ್ ಆಚರಣೆ ವೇಳೆ ಶ್ರೀಲಂಕಾ ರಾಜಧಾನಿಯಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ದಾಳಿ ಹಿನ್ನೆಲೆಯಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಕೊಲೊಂಬೊದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ಅಧ್ಯಕ್ಷರ ಕಚೇರಿ ತಿಳಿಸಿದೆ.
ಭಾನುವಾರ ಈಸ್ಟರ್ ಪ್ರಾರ್ಥನೆ ವೇಳೆ ಕೊಲಂಬೋದ ಚರ್ಚ್ ಹಾಗೂ ಸ್ಟಾರ್ ಹೋಟೆಲ್ಗಳಲ್ಲಿ ಬಾಂಬ್ ಸರಣಿ ಸ್ಫೋಟ ಸಂಭವಿಸಿತ್ತು. ಒಟ್ಟು ಎಂಟು ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ವೇಳೆ 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕೆಲವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 290ಕ್ಕೆ ಏರಿಕೆ ಆಗಿದೆ. ಸಾವಿನ ಸಂಖ್ಯೆ 300 ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ.
ಶ್ರೀಲಂಕಾ ದಾಳಿ ಹಿಂದೆ ನ್ಯಾಷನಲ್ ತವ್ಹೀದ್ ಜಮಾತ್ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ದಾಳಿಯಲ್ಲಿ ಸ್ಥಳೀಯರೂ ಸೇರಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ಹೇಳಿದೆ. ಅಲ್ಲದೆ,
ಈ ರೀತಿ ದಾಳಿ ನಡೆಯುವ ಬಗ್ಗೆ ಏ.4ರಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತಾದರೂ ಉಆವುದೇ ಮುನ್ನೆಚ್ಚರಿಕಾ ಕರ್ಮ ಕೈಗೊಂಡಿರಲಿಲ್ಲ ಎಂದು ಸರ್ಕಾರ ಒಪ್ಪಿಕೊಂಡಿದೆ.
ಶ್ರೀಲಂಕಾದಲ್ಲಿ ಬಾಂಬ್ ದಾಳಿ ನಡೆದ ಹಿನ್ನೆಲೆಯಲ್ಲಿ ಭಾರತದ ಕರಾವಳಿ ತೀರದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ.