Bangladesh Violence: ಬಾಂಗ್ಲಾದೇಶದಲ್ಲಿ ಉದ್ಯೋಗ ಮೀಸಲಾತಿಯನ್ನು ರದ್ದು (Cancellation of job reservation) ಮತ್ತು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಗ್ರೆನೇಡ್‌ಗಳನ್ನು ಬಳಸಿದ್ದರಿಂದ ಈ ಹಿಂಸಾತ್ಮಕ ಘರ್ಷಣೆಯಲ್ಲಿ ಸುಮಾರು 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ದೃಷ್ಟಿಯಲ್ಲಿ ರಾಜಧಾನಿ ಢಾಕಾ ಸೇರಿದಂತೆ ರಾಷ್ಟ್ರವ್ಯಾಪಿ ಕರ್ಫ್ಯೂ ಸೆಕ್ಷನ್ 144ಅನ್ನು ವಿಧಿಸಲಾಗಿದ್ದು, ನಿನ್ನೆ (ಆಗಸ್ಟ್ 04) ಸಂಜೆ 6ಗಂಟೆಯಿಂದ ಅನಿರ್ದಿಷ್ಟಾವಧಿಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸರ್ಕಾರದ ರಾಜೀನಾಮೆಗೆ ಒತ್ತಾಯಿಸಿ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಅವಾಮಿ ಲೀಗ್ , ಛತ್ರ ಲೀಗ್ ಮತ್ತು ಜುಬೋ ಲೀಗ್ ಕಾರ್ಯಕರ್ತರಿಂದ ನಡೆಸಲಾಗುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಈ ಹಿಂಸಾಚಾರ ಭುಗಿಲೆದ್ದಿದೆ.
ಹಿಂಸಾಚಾರದ ನಂತರ, ಗೃಹ ಸಚಿವಾಲಯ ಭಾನುವಾರ ಸಂಜೆ 6 ಗಂಟೆಯಿಂದ ದೇಶಾದ್ಯಂತ ಅನಿರ್ದಿಷ್ಟ ಕರ್ಫ್ಯೂ (Curfew) ವಿಧಿಸಲಾಗುತ್ತಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ವದಂತಿಗಳನ್ನು ಹರಡುವುದನ್ನು ತಡೆಯಲು ಫೇಸ್‌ಬುಕ್, ಮೆಸೆಂಜರ್, ವಾಟ್ಸಾಪ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ . 4ಜಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸುವಂತೆ ಮೊಬೈಲ್ ಆಪರೇಟರ್‌ಗಳಿಗೆ ಆದೇಶಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ- ವಿದೇಶಿದಲ್ಲಿ ಭಾರತದ ರಾಜನಿಗಾಗಿತ್ತು ಅವಮಾನ..! ರೊಚ್ಚಿಗೆದ್ದ ಆತ ಮಾಡಿದ್ದೇನು ಗೊತ್ತಾ..? ನೀವು ಊಹಿಸೋಕೂ ಸಾಧ್ಯವಿಲ್ಲ
ಬಾಂಗ್ಲಾದೇಶದಲ್ಲಿ ಹಿಂಸಾಚಾರ (Bangladesh Violence) ಪುನರಾರಂಭಗೊಂಡ ನಂತರ ದೇಶದಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳು ಎಚ್ಚರದಿಂದಿರುವಂತೆ ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.
ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸೂಚನೆ:
ಈ ಕುರಿತಂತೆ, ಸಿಲ್ಹೆಟ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು (Indian Embassy) ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಭಾರತೀಯ ಸಹಾಯಕ ಹೈಕಮಿಷನ್, ಸಿಲ್ಹೆಟ್‌ನ ಅಧಿಕಾರ ವ್ಯಾಪ್ತಿಯಲ್ಲಿ ವಾಸಿಸುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳು ಈ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ ಮತ್ತು ಎಚ್ಚರವಾಗಿರಲು ಸೂಚಿಸಲಾಗಿದೆ".
ಭಾರತೀಯ ರಾಯಭಾರ ಕಚೇರಿಯು ತುರ್ತು ಪರಿಸ್ಥಿತಿಗಳಿಗಾಗಿ ಸಹಾಯವಾಣಿ ಸಂಖ್ಯೆಯನ್ನು ಸಹ ನೀಡಲಾಗಿದ್ದು, "ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ, ದಯವಿಟ್ಟು +88-01313076402 ಅನ್ನು ಸಂಪರ್ಕಿಸಿ" ಎಂದು ಭಾರತೀಯ ರಾಯಭಾರ ಕಚೇರಿ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.
ಢಾಕಾದಲ್ಲಿರುವ ಭಾರತದ ಹೈಕಮಿಷನ್ ಅವರ ತುರ್ತು ದೂರವಾಣಿ ಸಂಖ್ಯೆಗಳ 8801958383679, 8801958383680, 8801937400591 ಮೂಲಕ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಇದನ್ನೂ ಓದಿ- ಈ 5 ದೇಶಗಳ ಜನರು ಮಾತ್ರ ಯಾವುದೇ ಆದಾಯ ತೆರಿಗೆ ಪಾವತಿಸಬೇಕಾಗಿಲ್ಲ..!
ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಸೂಚನೆ:
ಈ ಮಧ್ಯೆ, ಮುಂದಿನ ಸೂಚನೆವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಭಾರತೀಯರಿಗೆ ಸಲಹೆ ನೀಡಿದೆ. ಪ್ರಸ್ತುತ ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ತನ್ನ ನಾಗರಿಕರಿಗೆ ಅತ್ಯಂತ ಜಾಗರೂಕರಾಗಿರಿ ಮತ್ತು ಅವರ ಚಲನವಲನಗಳನ್ನು ಮಿತಿಗೊಳಿಸುವಂತೆ ಎಚ್ಚರಿಸಿದೆ.
ಬಾಂಗ್ಲಾದೇಶ ಹಿಂಸಾಚಾರ ಭುಗಿಲೇಳಲು ಪ್ರಮುಖ ಕಾರಣ:
ಬಾಂಗ್ಲಾದೇಶದಲ್ಲಿ 1971ರ ಪಾಕಿಸ್ತಾನದ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಯೋಧರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ಕೋಟಾ ವ್ಯವಸ್ಥೆ ಜಾರಿಯಲ್ಲಿದೆ. ಈ ಕೋಟಾ ವ್ಯವಸ್ಥೆ ರದ್ದಾಗಬೇಕೆಂದು ಒತ್ತಾಯಿಸಿ ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘಗಳು ಪ್ರತಿಭಟನೆಗಳನ್ನು ಆರಂಭಿಸಿದವು. ದೇಶಾದ್ಯಂತ ಹಿಂಸಾಚಾರ ತೀವ್ರಗೊಂಡ ಹಿನ್ನಲೆಯಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯವು, ಸರ್ಕಾರಿ ಉದ್ಯೋಗಗಳಲ್ಲಿ 93% ಉದ್ಯೋಗಗಳನ್ನು ಅರ್ಹತೆಯ ಆಧಾರದ ಮೇಲೆ ಹಾಗೂ 7% ಉದ್ಯೋಗಗಳನ್ನು ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಹೋರಾಟಗಾರರ ಕುಟುಂಬಗಳಿಗೆ ಮೀಸಲಿಡುವಂತೆ ಆದೇಶಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.